ಪುರಸಭೆ ಫಲಿತಾಂಶದಲ್ಲಿ ಜನಾಭಿಪ್ರಾಯ ಬದಲಾಗಿರುವ ಬಗ್ಗೆ ಬಿಜೆಪಿ ಆಲೋಚಿಸಲಿ: ಶಿವಸೇನೆ
ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಜನಾಭಿಪ್ರಾಯ ಬದಲಾಗಿರುವುದೇಕೆ ಎಂಬ ಬಗ್ಗೆ ಸಿಎಂ ದೇವೇಂದ್ರ ಫಡ್ನವೀಸ್ ಆಲೋಚಿಸಬೇಕು ಎಂದು ಶಿವಸೇನೆ ಹೇಳಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಜನಾಭಿಪ್ರಾಯ ಬದಲಾಗಿರುವುದೇಕೆ ಎಂಬ ಬಗ್ಗೆ ಸಿಎಂ ದೇವೇಂದ್ರ ಫಡ್ನವೀಸ್ ಆಲೋಚಿಸಬೇಕು ಎಂದು ಶಿವಸೇನೆ ಹೇಳಿದೆ.
ಭಾನುವಾರ ನಡೆದ ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್- ಎನ್.ಸಿ.ಪಿ ಗೆ ಉತ್ತಮ ಫಲಿತಾಂಶ ದೊರೆತಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ರಾಜ್ಯದ ಜನತೆಗೆ ಮನಸ್ಥಿತಿ ಬದಲಾಗಿರುವುದರ ಬಗ್ಗೆ ಬಿಜೆಪಿ ಯೋಚನೆ ಮಾಡಬೇಕಿದೆ ಎಂದು ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಶಿವಸೇನೆ ಹೇಳಿದೆ.
ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದ ಶಿವಸೇನೆ, ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಕಲ್ಯಾಣ್- ದೊಂಬಿವಿಲಿ ಪುರಸಭೆಯ ಚುನಾವಣೆಯಲ್ಲಿ, ತನಗೆ ಸವಾಲೆದುರಾಗಿತ್ತಾದರೂ, ಜನರು ನಮಗೇ ಅಧಿಕಾರ ನೀಡಿದ್ದಾರೆ. ಉಳಿದ ಪಕ್ಷಗಳೆಲ್ಲವೂ ತರಗೆಲೆಗಳಂತೆ ಉದುರಿಹೋಗಿವೆ, ಸ್ವತಂತ್ರವಾಗಿ ಅಧಿಕಾರಕ್ಕೆ ಬರ್ವ ಮಾತನ್ನಾಡುತ್ತಿದ್ದ ಕಾಂಗ್ರೆಸ್ ಗೆ 4 ಸ್ಥಾನಗಳು ದೊರೆತಿದ್ದರೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 2 ಸ್ಥಾನಗಳನ್ನು ಪಡೆದಿವೆ.
ಮಿಶ್ರ ಜನಾಭಿಪ್ರಾಯ ವ್ಯಕ್ತವಾಗಿದ್ದರೂ ಜನತೆ ಶಿವಸೇನೆಯೊಂದಿಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಜನಾಭಿಪ್ರಾಯವನ್ನು ನಮ್ರತೆಯಿಂದ ಸ್ವೀಕರಿಸಿ ಕೆಡಿಎಂಸಿ ಪ್ರದೇಶವನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಶಿವಸೇನೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


