ಪ್ರಧಾನಿ ಮೋದಿ ಮೊದಲು ಗೋಮಾಂಸ ರಫ್ತು ತಡೆಯಲಿ: ಎಚ್‌ಡಿಕೆ
ಗೋಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತೀವ್ರ ತರಾಟೆಗೆ ಗೆದುಕೊಂಡಿರುವ ಜೆಡಿಎಸ್...

ಕಲಬುರ್ಗಿ: ಗೋಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತೀವ್ರ ತರಾಟೆಗೆ ಗೆದುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ವಿದೇಶಕ್ಕೆ ರಫ್ತಾಗುವ ಗೋಮಾಂಸವನ್ನು ತಡೆಯಲಿ ಎಂದಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ಕಾಂಗ್ರೆಸ್ ಮತ್ತು ಬಿಜೆಪಿ ಕ್ಷುಲ್ಲಕ ಕಾರಣಕ್ಕೆ ದೇಶ ಒಡೆಯುವ ಕೆಲಸ ಮಾಡುತ್ತಿವೆ. ಗೋಮಾಂಸ ಸೇವನೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಅನಗತ್ಯವಾಗಿ ಹೆಚ್ಚು ಸಮಯ ಹಾಳು ಮಾಡುತ್ತಿವೆ ಎಂದರು.
ಗೋ ರಕ್ಷಣೆ ಬಗ್ಗೆ ಬಿಜೆಪಿ ಹೆಚ್ಚು ಮಾತನಾಡುತ್ತಿದೆ. ಆದರೆ ಗೋವು ಸಾಕುವ ರೈತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಗೋವುಗಳಿಗೆ ನೀರು, ಮೇವು ಪೂರೈಕೆ ಮಾಡಲಿ ಎಂದರು. ಅಲ್ಲದೆ ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು.
ಈ ಹಿಂದೆ ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರವೂ ರಾಜ್ಯವನ್ನು ಲೂಟಿ ಮಾಡಿದ್ದು, ಈಗ ಕಾಂಗ್ರೆಸ್ ಸರ್ಕಾರವೂ ಲೂಟಿ ಮಾಡುವುದನ್ನು ಮುಂದುವರೆಸಿದೆ ಎಂದು ಆರೋಪಿಸಿದರು.
ಇದೇ ವೇಳೆ ಹಂದಿ ಮಾಂಸ ಸೇವನೆ ಬಗ್ಗೆ ಹೇಳಿಕೆ ನೀಡಿದ್ದ ಪೇಜಾವರ ಶ್ರೀಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ, ಸ್ವಾಮಿಜಿ ಬಾಯಲ್ಲಿ ಇಂಥಹ ಪದ ಬಂದಿದ್ದು ಸರಿಯಲ್ಲ. ಇವರಿಗೆ ಸಮಾಜದಲ್ಲಿ ಶಾಂತಿಯಿಂದ ಬಾಳೋದು ಬೇಕಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


