ರಾಜಕೀಯ

ಸಚಿವರ ರಾಜಿನಾಮೆಗೆ ಬಿಜೆಪಿ ಒತ್ತಾಯ

ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಚಿವರ ರಾಜಿನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು...

Published On :
ಬೆಂಗಳೂರು: ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಚಿವರ ರಾಜಿನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದ ನಿಯೋಗವು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಆಡಳಿತಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. 
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಷಿ, ಸಚಿವರ ಮನೆಯಲ್ಲಿ ನಡೆದ ಭ್ರಷ್ಟಾಚಾರ ನಡೆದಿದ್ದರೂ ಮುಖ್ಯಮಂತ್ರಿಗಳು ಕೇವಲ ಉಪನಿರ್ದೇಶಕರನ್ನು ಮಾತ್ರ ಅಮಾನತು ಮಾಡಿ ರಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈಗ ಬೆಳಕಿಗೆ ಬಂದಿರುವ ಘಟನೆ ಅದಕ್ಕೆ ತಾಜಾ ನಿದರ್ಶನವಾಗಿದೆ. 
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಕ್ರಮದ ಬಗ್ಗೆ ಯೋಚಿಸುವೆ ಎಂದು ಸಿಎಂ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.