ರಾಜಕೀಯ

ಬಿಜೆಪಿಯವರಿಗೆ ಭಾಷಾ ಸಂಸ್ಕೃತಿ ಇಲ್ಲ: ಸಿದ್ದರಾಮಯ್ಯ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರಿಗೆ ಭಾಷಾ ಸಂಸ್ಕೃತಿ ಎಂಬುದಿಲ್ಲ. ಬಾಯಿಗೆ ಬಂದಂತೆ ಮಾತಾಡುತ್ತಾರೆ ಎಂದಿದ್ದಾರೆ...

ಬಿಜೆಪಿಯವರಿಗೆ ಭಾಷಾ ಸಂಸ್ಕೃತಿ ಇಲ್ಲ: ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರಿಗೆ ಭಾಷಾ ಸಂಸ್ಕೃತಿ ಎಂಬುದಿಲ್ಲ. ಬಾಯಿಗೆ ಬಂದಂತೆ ಮಾತಾಡುತ್ತಾರೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಮೂರು ಬಾರಿ ಸಂಸದರಾಗಿ ಆಯ್ಕೆಯಾದವರು. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷ ಹುದ್ದೆ ನಿರ್ವಹಿಸಿದವರು.

ಅಂಥವರ ವಿರುದ್ಧ ಶೋಭಾ ಬಳಸಿರುವ ಭಾಷೆ ಅವರಿಗೆ ಶೋಭೆ ತರುವಂಥದ್ದಲ್ಲ. ವ್ಯಕ್ತಿಯೊಬ್ಬರ ಹುದ್ದೆ, ಸಾಧನೆ ಪರಿಗಣಿಸದೇ ಲಘುವಾಗಿ ಮಾತಾಡುವುದು ಬಿಜೆಪಿಯವರ ಸಂಸ್ಕೃತಿ. ಹೀಗಾಗಿ ಇಂಥ ಹೇಳಿಕೆಗಳು ಬರುತ್ತವೆ ಎಂದು ಸಿಎಂ ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.