ರಾಜಕೀಯ

ನ.16ರಿಂದ 10 ದಿನ ವಿಧಾನಸಭೆ ಅಧಿವೇಶನ

ನವೆಂಬರ್ 16ರಿಂದ ನವೆಂಬರ್ 27ರವರೆಗೆ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು,...

ನ.16ರಿಂದ 10 ದಿನ ವಿಧಾನಸಭೆ ಅಧಿವೇಶನ
ಸ್ಪೀಕರ್ ಕಾಗೋಡು ತಿಮ್ಮಪ್ಪ
Published On :

ಬೆಂಗಳೂರು: ನವೆಂಬರ್ 16ರಿಂದ ನವೆಂಬರ್ 27ರವರೆಗೆ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಲಿದೆ.

ಮಡಿಕೇರಿ ಗಲಭೆ, ಮುಂದುವರೆದ ರೈತರ ಆತ್ಮಹತ್ಯೆ, ಬರ ಪರಿಹಾರದಲ್ಲಿ ಸರ್ಕಾರದ ವೈಫಲ್ಯ, ಸಚಿವ ಆಂಜನೇಯ ಅವರ ಪತ್ನಿಯ ಲಂಚ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸರ್ಕಾರವನ್ನು ಹಣಿಯಲು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತುದಿಗಾಲಲ್ಲಿ ನಿಂತಿವೆ.

10 ದಿನಗಳ ಅಧಿವೇಶನದ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ನ.16ರಿಂದ 27ರವರೆಗೆ 10 ದಿನಗಳ ಕಾಲ ಬೆಂಗಳೂರಿನಲ್ಲಿ 14ನೇ ವಿಧಾಸಭೆಯ 8ನೇ ಅಧಿವೇಶನ ನಡೆಯಲಿದೆ ಎಂದರು.

ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಅಂದು ರೈಲು ಅಪಘಾತದಲ್ಲಿ ಮೃತಪಟ್ಟ ಶಾಸಕ ವೆಂಕಟೇಶ್ ನಾಯಕ, ಮಾಜಿ ಸಚಿವರಾದ ಎಂ.ಮಹದೇವ್ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

ಈ ಅಧಿವೇಶನದಲ್ಲಿ ಕರ್ನಾಟಕ ಕಾಕಂಬಿ ನಿಯಂತ್ರಣ ವಿಧೇಯಕ 2014, ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವಿಧೇಯಕ 2015 ಮಂಡನೆಯಾಗಲಿವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.