ರಾಜಕೀಯ

ದೇಶದಲ್ಲಿನ ಅಸಹಿಷ್ಣುತೆಗೆ ಮೋದಿ ಕಾರಣವಲ್ಲ: ದೇವೇಗೌಡ

ಹೆಚ್ಚುತ್ತಿರುವ ಅಸಹಿಷ್ಣುತೆಗೆ, ಆರ್ ಎಸ್ ಎಸ್ ಕಾರಣವೇ ಹೊರತು ಪ್ರಧಾನಿ ನರೇಂದ್ರ ಮೋದಿ ಅಲ್ಲ ಎಂದು ಮಾಜಿ ಪ್ರಧಾನಿ, ಎಚ್.ಡಿ.ದೇವೇಗೌಡ ಹೇಳಿದ್ದಾರೆ...

ದೇಶದಲ್ಲಿನ ಅಸಹಿಷ್ಣುತೆಗೆ ಮೋದಿ ಕಾರಣವಲ್ಲ: ದೇವೇಗೌಡ
ಎಚ್.ಡಿ.ದೇವೇಗೌಡ
Published On :

ಚಿಕ್ಕಮಗಳೂರು: ಹೆಚ್ಚುತ್ತಿರುವ ಅಸಹಿಷ್ಣುತೆಗೆ, ಆರ್ ಎಸ್ ಎಸ್ ಕಾರಣವೇ ಹೊರತು ಪ್ರಧಾನಿ ನರೇಂದ್ರ ಮೋದಿ ಅಲ್ಲ ಎಂದು ಮಾಜಿ ಪ್ರಧಾನಿ, ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ದೇಶದಲ್ಲಿನ ಅಸಹಿಷ್ಣುತೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತವನ್ನು ಆರ್ ಎಸ್ ಎಸ್ ನಿಯಂತ್ರಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿಯೂ ಆರ್ ಎಸ್ ಎಸ್ ಆಡಳಿತವನ್ನು ನಿಯಂತ್ರಿಸುತ್ತಿತ್ತು ಎಂದು ಆರೋಪಿಸಿದ್ದಾರೆ.

ಶೃಂಗೇರಿ ಶ್ರೀಗಳಿಗೆ ಫೇಸ್ ಬುಕ್ ನಲ್ಲಿ ಅವಮಾನ ಮಾಡಿದ್ದು ಸರಿಯಲ್ಲ ಎಂದು ಹೇಳಿದ ದೇವೇಗೌಡರು ಈ ರೀತಿ ಅವಮಾನ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯ ಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.