ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.
ಇಂದು ವಿಧಾನ ಪರಿಷತ್ನಲ್ಲಿ ವಿಷಯ ಪ್ರಸ್ತಾಪಿಸಿದ ಈಶ್ವರಪ್ಪ ಅವರು, ಕಳೆದ ಒಂದು ವಾರದಲ್ಲಿ ಎರಡು ಸಲ ನನಗೆ ಜೀವ ಬೆದರಿಕೆ ಕರೆ ಬಂದಿದ್ದು, ವಿದೇಶದಿಂದ ಕರೆ ಮಾಡಿದ್ದ ವ್ಯಕ್ತಿ, ಉರ್ದು ಮಿಶ್ರಿತ ಕನ್ನಡ ಭಾಷೆಯಲ್ಲಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದರು.
ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ನನಗೆ ಸೂಕ್ತ ಭದ್ರತೆ ನೀಡಬೇಕು ಎಂದು ಸದನದಲ್ಲಿ ಮನವಿ ಮಾಡಿದ ಈಶ್ವರಪ್ಪ, ಮಂತ್ರಿಗಳು, ಉದ್ಯಮಿಗಳಿಗೆ ಬೆದರಿಕೆ ಹಾಕುವುದು ಹೆಚ್ಚಾಗಿದೆ. ಹಾಗಾಗಿ ಗೃಹ ಇಲಾಖೆ ಕ್ರಮ ಕೈಗೊಳ್ಳಬೇಕು ಮತ್ತು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಒಂದು ವಾರದಲ್ಲಿ ಎರಡು ಸಲ ಜೀವ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರೊಂದಿಗೆ ಚರ್ಚಿಸಿ, ಇಂದು ಸಂಜೆ ಪೊಲೀಸರಿಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.
ಟಿಪ್ಪು ಜಂಯತಿ ಆಚರಣೆ ಕುರಿತು ಈಶ್ವರಪ್ಪ ನೀಡಿದ ಹೇಳಿಕೆಗಳು ಇದಕ್ಕೆ ಕಾರಣ ಎನ್ನಲಾಗಿದೆ. ಕೇರಳದ ರಾಷ್ಟ್ರ ದ್ರೋಹಿ ಮುಸ್ಲಿಂರು ನಮ್ಮ ರಾಜ್ಯಕ್ಕೆ ಬಂದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ಹಿಂದೂ ಗಳನ್ನು ಕೊಲೆ ಮಾಡುತ್ತಿದ್ದಾರೆ ಎಂಬ ವಿವಾದತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


