ನೆಹರು ಸಾಧನೆಯನ್ನು ಗುರುತಿಸದಿರುವುದು ಬಿಜೆಪಿ ಅಸಹಿಷ್ಣುತೆಯ ಪ್ರತಿಬಿಂಬ: ಕಾಂಗ್ರೆಸ್
ಎನ್ ಡಿಎ ಸರ್ಕಾರ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಸಾಧನೆಗಳನ್ನು ಗುರುತಿಸದೇ ಇರುವುದು ದೇಶದಲ್ಲಿನ ಅಸಹಿಷ್ಣುತೆ ಇದೆ ಎಂಬುದನ್ನು ಪ್ರತಿಬಿಂಬಿಸುತ್ತದೆ.

ನವದೆಹಲಿ: ಅಸಹಿಷ್ಣುತೆ ವಿಚಾದರಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಎನ್ ಡಿಎ ಸರ್ಕಾರ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಸಾಧನೆಗಳನ್ನು ಗುರುತಿಸದೇ ಇರುವುದು ದೇಶದಲ್ಲಿನ ಅಸಹಿಷ್ಣುತೆ ಇದೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.
ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಬಿಜೆಪಿ ಮಾಜಿ ಪ್ರಧಾನಿ ನೆಹರು ಅವರ ಸಾಧನೆಗಳನ್ನು ಕಡೆಗಣಿಸುತ್ತಿದೆ, "ಜರ್ಮನಿಯ ಸಂವಿಧಾನ ಹಾಗೂ ಅದರ ಸರ್ವಾಧಿಕಾರಿ ಬಗ್ಗೆ ಮಾತನಾಡುತ್ತೀರಿ, ಆದರೆ ಮಾಜಿ ಪ್ರಧಾನಿ ನೆಹರು ಅವರ ಬಗ್ಗೆ ಮಾತನಾಡಲು ನಿಮಗೆ ನಾಚಿಕೆಯಾಗುತ್ತದೆ, ಭಾರತದ ಪ್ರಥಮ ಪ್ರಧಾನಿಯ ಸಾಧನೆಗಳನ್ನು ಗುರುತಿಸಲು ನಿಮ್ಮಿಂದ ಸಾಧ್ಯಾಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸರ್ಕಾರ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್, ಸರ್ದಾರ್ ಪಟೇಲ್, ನೆಹರು ಅವರ ಬಗ್ಗೆ ಬೇಧಭಾವ ಉಂಟು ಮಾಡಿ ಘರ್ಷಣೆ ಉಂಟಾಗಲು ಕಾರಣವಾಗುತ್ತಿದೆ. ತಮ್ಮ ವಿರುದ್ಧದ ಆರೋಪಗಳನ್ನು ತಡೆಗಟ್ಟಲು ಬಿಜೆಪಿ ಅಂಬೇಡ್ಕರ್ ಅವರನ್ನು ರಕ್ಷಣಾಕವಚವಾಗಿ ಬಳಸಿಕೊಳ್ಳುತ್ತಿದೆ ಎಂದು ಪ್ರಧಾನಿ ಸಮ್ಮುಖದಲ್ಲಿ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ.
ಸಂವಿಧಾನದ ಬಗ್ಗೆ ನಡೆಯುವ ಚರ್ಚೆ ವೇಳೆ ಕೇಂದ್ರ ಸಚಿವ ಅರುಣ್ ಜೇಟ್ಲಿ ನೆಹರು ಅವರನ್ನು ಅಂಗೀಕರಿಸಲು ತಯಾರಿರಲಿಲ್ಲ ಬದಲಾಗಿ ಹಿಟ್ಲರ್ ನ್ನು ಉಲ್ಲೇಖಿಸಿದ್ದಾರೆ ಎಂದು ಆಜಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


