ರಾಜಕೀಯ

ಕಾಂಗ್ರೆಸ್ ಪಟ್ಟಿ ಎರಡು ದಿನದಲ್ಲಿ ಸಿದ್ಧ: ಸಿಎಂ

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಇನ್ನೆರಡು ದಿನಗಳಲ್ಲಿ...

ಕಾಂಗ್ರೆಸ್ ಪಟ್ಟಿ ಎರಡು ದಿನದಲ್ಲಿ ಸಿದ್ಧ: ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಇನ್ನೆರಡು ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಮುಕ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆದಿ ಚುಂಚನಗಿರಿ ಮಠದ ವಿಜಯನಗರ ಶಾಖೆಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಅವರು ಈ ವಿಷಯ ತಿಳಿಸಿದ್ದಾರೆ. ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಸಭೆಗಳನ್ನು ಸಿದ್ಧಪಡಿಸಲಾಗಿದೆ. ಆದರೆ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರೊಂದಿಗೆ ಚರ್ಚಿಸಬೇಕಿದ್ದು, ನಂತರ ಅಂತಿಮ ಪಟ್ಟಿಯನ್ನು ಅಖೈರುಗೊಳಿಸಲಾಗುತ್ತದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿ ಅಂತಿಮಪಟ್ಟಿ ತಯಾರಿಸಲಾಗುತ್ತದೆ. ಅದನ್ನು ದೆಹಲಿಗೆ ಕೊಂಡೊಯ್ತು ಒಪ್ಪಿಗೆ ಪಡೆಯಲಾಗುತ್ತದೆ ಎಂದು ವಿವರಿಸಿದರು. 
ಇದಕ್ಕೂ ಮುನ್ನ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಸಿದ್ದರಾಮಯ್ಯ, ಆಧ್ಯಾತ್ಮ ಮತ್ತು ಸಾಮಾಜಿಕ ವಿಚಾರಗಳನ್ನು ವಿನಿಮಯ ಮಾಡಿಕೊಂಡದರು. ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆದಿಚುಂಚನಗಿರಿ ಮಠದಿಂದ ನಡೆಸಿರುವ ಅನೇಕ ಕಾರ್ಯಕ್ರಮಗಳಿಗೆ ಬರುವುದಕ್ಕೆ ಆಗಲಿಲ್ಲ. ಕಾರ್ಯದ ಒತ್ತಡದಿಂದ ಸ್ವಾಮೀಜಿ ಅವರನ್ನೂ ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಭಾನುವಾರ ಬಿಡುವು ಮಾಡಿಕೊಂಡು ಭೇಟಿ ಮಾಡಿದ್ದೇನೆ. ಇದರಲ್ಲಿ ಯಾವುದೇ ವಿಶೇಷವಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.