ಅಸಹಿಷ್ಣುತೆ ತಡೆಗೆ ಸಲಹೆ ಸ್ವೀಕರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್
ಅಸಹಿಷ್ಣುತೆ ಬಗ್ಗೆ ಸಂಸತ್ ನಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದು ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ತಡೆಗಟ್ಟಲು ಸಂಸದರಿಂದ ಸಲಹೆ ಪಡೆಯಲು ಕೇಂದ್ರ ಸರ್ಕಾರ ಸಿದ್ಧವಿದೆ
ನವದೆಹಲಿ: ಅಸಹಿಷ್ಣುತೆ ಬಗ್ಗೆ ಸಂಸತ್ ನಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದು ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ತಡೆಗಟ್ಟಲು ಸಂಸದರಿಂದ ಸಲಹೆ ಪಡೆಯಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಪ್ರಕಾರ ದೇಶದಲ್ಲಿ ಅಸಹಿಷ್ಣುತೆ ಎಂಬುದಿಲ್ಲ. ಆದರೂ ಕೆಲವರು ಆರೋಪ ಮಾಡುತ್ತಿದ್ದಾರೆ ಆದ್ದರಿಂದ ಅಸಹಿಷ್ಣುತೆಯನ್ನು ಹೇಗೆ ತಡೆಗಟ್ಟಬಹುದೆಂಬುದರ ಬಗ್ಗೆ ಅವರಿಂದಲೇ ಸಲಹೆ ಪಡೆಯಲು ಬಯಸುತ್ತೇವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಸಂಸತ್ ನಲ್ಲಿ ಅಸಹುಷ್ಣುತೆ ಬಗ್ಗೆ ಚರ್ಚೆ ನಡೆಸಲು ನಿಯಮ 193 ರ ಅಡಿಯಲ್ಲಿ ಸುಮಿತ್ರ ಮಹಾಜನ್ ಅವಕಾಶ ನೀಡಿದ್ದು, ಚರ್ಚೆ ನಡೆಯುತ್ತಿದೆ. ಚರ್ಚೆಯ ಪ್ರಾರಂಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಕೇಂದ್ರ ಸರ್ಕಾರಕ್ಕೆ ದೇಶದಲ್ಲಿ ಅಸಹಿಷ್ಣುತೆ ಇರುವುದು ಕಂಡುಬರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

