ರಾಜಕೀಯ

ಮೈತ್ರಿ ಬೇಕಾ?: ಮಧು ಬಂಗಾರಪ್ಪ ಪ್ರಶ್ನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷ ಏಳೆಂಟು ಸ್ಥಾನ ಗೆಲ್ಲುವ ವಿಶ್ವಾಸವಿದ್ದು, ಮೈತ್ರಿ ಅವಶ್ಯಕತೆ ಇದೆಯೇ...

ಮೈತ್ರಿ ಬೇಕಾ?: ಮಧು ಬಂಗಾರಪ್ಪ ಪ್ರಶ್ನೆ
ಮಧು ಬಂಗಾರಪ್ಪ
Published On :
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷ ಏಳೆಂಟು ಸ್ಥಾನ ಗೆಲ್ಲುವ ವಿಶ್ವಾಸವಿದ್ದು, ಮೈತ್ರಿ ಅವಶ್ಯಕತೆ ಇದೆಯೇ ಎಂಬುದನ್ನು ಯೋಚಿಸಬೇಕಿದೆ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ. 
ಪಕ್ಷದಲ್ಲಿ ಗೊಂದಲ ಇರೋದು ನಿಜ. ಅದನ್ನು ವರಿಷ್ಠರು ನೋಡಿಕೊಳ್ಳುತ್ತಾರೆ. ಚೆಲುವರಾಯಸ್ವಾಮಿ, ಜಮೀರ್ ಅಹ್ಮದ್ ಹಾಗೂ ರಾಜ್ಯಾಧ್ಯಕ್ಷರ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು ಬಗೆಹರಿಸಲಿದ್ದಾರೆ ಎಂದರು. 
ಬಿಬಿಎಂಪಿಯಲ್ಲಿ ಮೊದಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಮೈತ್ರಿಗೆ ಮುಂದೆ ಬಂದವು. ಆ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಂಡರು. ಈಗಲೂ ಪಕ್ಷದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಗೊಂದಲದ ಬಗ್ಗೆ ಬಹಿರಂಗ ಚರ್ಚೆ ಮಾಡುವ ಬದಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಿದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.