ರಾಜಕೀಯ

ಮುಖ್ಯಮಂತ್ರಿ ಇಂದು ದೆಹಲಿಗೆ

ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಯಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಮಂಗಳವ ಆರ ದೆಹಲಿಗೆ ತೆರಳಲಿದ್ದಾರೆ...

ಮುಖ್ಯಮಂತ್ರಿ ಇಂದು ದೆಹಲಿಗೆ
ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಚಿತ್ರದುರ್ಗ: ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಯಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಮಂಗಳವ ಆರ ದೆಹಲಿಗೆ ತೆರಳಲಿದ್ದಾರೆ.

ಹೈಕಮಾಂಡ್ ಜತೆಗೆ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಈ ವಿಚಾರವನ್ನು ಖುದ್ದು ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ  ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಚಿತ್ರದುರ್ಗ ಕ್ಷೇತ್ರ ಪ್ರತಿನಿಧಿಸುತ್ತಿರುವ ರಘು ಆಚಾರ್ ಹೊರಗಿನ ಅಭ್ಯರ್ಥಿ ಎಂದು ಯಾಕೆ ಅನಿಸಬೇಕು? ಈಗಾಗಲೇ  ಅವರು ಈ ಕ್ಷೇತ್ರ ಪ್ರತಿನಿಧಿಸಿ ಕಳೆದೆರಡು ವರ್ಷಗಳಿಂದಲೂ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಸೋಮವಾರ ಪತ್ರಕರ್ತರ ಪ್ರಶ್ನೆಪೊದಕ್ಕೆ ಉತ್ತರಿಸಿದರು.

ಇದೇ ವೇಳೆ, ಬುಧವಾರ ಬಹುತೇಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದೂ ಮಾಹಿತಿ ನೀಡಿದರು. ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಪದಚ್ಯುತಿ ವಿಚಾರ ಸಂಬಂಧ  ವಿಧಾನಸಭಾಧ್ಯಕ್ಷರು ಹೈಕೋರ್ಟ್‍ಗೆ ವರದಿ ಸಲ್ಲಿಸಲಿದ್ದಾರೆ. ಸರಳ ವಿವಾಹದ ಬಗ್ಗೆ ಖಾಸಗಿ ವಿಧೇಯಕವನ್ನು ಮಂಡಿಸಲಾಗಿದೆ. ಈ ವಿಧೇಯಕದ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದು ಸಿಎಂ ಈ ವೇಳೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.