ಸಂಪುಟ ವಿಸ್ತರಣೆ ಬಗ್ಗೆ ಪರಮ್ ವಿವರಣೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಈತನ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಆದರೆ ಈಗ ಬಹಳ ದಿನಗಳ ನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮಾತನಾಡಲಾರಂಭಿಸಿದ್ದಾರೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಈತನ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಆದರೆ ಈಗ ಬಹಳ ದಿನಗಳ ನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮಾತನಾಡಲಾರಂಭಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರವಾಸದ ನಂತರ ನಡೆಯುತ್ತದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕಸರತ್ತು ಮುಂದೆ ಹೋಗುತ್ತಿರುವುದು ನಿಜ. ಇದಕ್ಕೆ ಅನೇಕ ಕಾರಣಗಳಿರಬಹುದು. ಆದರೆ ಈ ಬಾರಿ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿದೆ. ಅಕ್ಟೋಬರ್ 9 ಮತ್ತು 10 ರಂದು ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದು ಹೋದ ನಂತರ ನಡೆಯುವ ಸಂಭವ ಅಧಿಕ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಕೃಷಿ ವಿವಿಯಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಮ್ಮಿಲನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪುಟ ವಿಸ್ತರಣೆ ಇಷ್ಟೊತ್ತಿಗೆಲ್ಲಾ ಆಗಿಬಿಡುತ್ತಿತ್ತು. ಆದರೆ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತ ಪ್ರಧಾನ ಕಾರ್ಯದರ್ಶಿ ಅವರು ವಿದೇಶ ಪ್ರವಾಸದಲ್ಲಿದ್ದರು. ಅವರಿಲ್ಲದ ಕಾರಣ ಇದು ಮುಂದೆ ಹೋಗಿತ್ತು. ಈಗ ಅವರು ವಾಪಸ್ಸಾಗಿದ್ದಾರೆ. ಆದ್ದರಿಂದ ಮತ್ತೆ ಮುಂದೆ ಹೋಗದೆ ವಿಸ್ತರಣೆ ಪ್ರಕ್ರಿಯೆ ನಡೆಯುತ್ತದೆ ಎಂಬ ವಿಶ್ವಾಸವಿದೆ. ಆದರೆ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದು ಹೋದ ನಂತರವಷ್ಟೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚು ಎಂದು ಅವರು ತಿಳಿಸಿದರು.
ರಾಹುಲ್ ಪಾದಯಾತ್ರೆ: ರಾಹುಲ್ ಗಾಂಧಿ ಎಲ್ಲಿಯೂ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಮೊದಲ ದಿನ ಮಂಡ್ಯದಲ್ಲಿ 56 ರೈತರೊಂದಿಗೆ ಸಂವಾದ ನಡೆಸುವ ಅವರು, ಕಾಂಗ್ರೆಸ್ ಪ್ರತಿನಿಧಿಗಳೊಂದಿಗೆ ಚರ್ಚಿಸುತ್ತಾರೆ.ಮರುದಿನ ಹಾವೇರಿಯಲ್ಲಿ ರೈತರ ಮನೆಗಳಿಗೆ ಭೇಟಿ ನೀಡಲು 9 ಕಿ.ಮಿ ದೂರದವರೆಗೂ ಪಾದಯಾತ್ರೆ ನಡೆಸಲಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


