ರಾಹುಲ್ ಗಾಂಧಿ ಆಗಮನಕ್ಕೆ ರಾಜ್ಯದಲ್ಲಿ ಭರದ ಸಿದ್ಧತೆ
ಆತ್ಮಹತ್ಯೆಗೀಡಾದ ರೈತ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಇದೇ ಅಕ್ಟೋಬರ್ 9 ಮತ್ತು 10 ರಂದು ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಮುಖಂಡರು ಭರದ ಸಿದ್ಧತೆ ನಡೆಸಿದ್ದಾರೆ...

ಬೆಂಗಳೂರು: ಆತ್ಮಹತ್ಯೆಗೀಡಾದ ರೈತ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಇದೇ ಅಕ್ಟೋಬರ್ 9 ಮತ್ತು 10 ರಂದು ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಮುಖಂಡರು ಭರದ ಸಿದ್ಧತೆ ನಡೆಸಿದ್ದಾರೆ.
ಕಾಂಗ್ರೆಸ್ ಮೂಲಗಳ ಪ್ರಕಾರ ರಾಹುಲ್ ಗಾಂಧಿ ಇದೇ ಅಕ್ಟೋಬರ್ 9 ಮತ್ತು 10 ರಂದು ರಾಜ್ಯಕ್ಕೆ ಆಗಮಿಸಲಿದ್ದು, 2 ದಿನಗಳ ಕಾಲ ಉಳಿಯಲಿದ್ದಾರೆ. ಅ.9ರ ರಾಹುಲ್ ಅಂದು ಬೆಳಗ್ಗೆ ಕೆಲವು ರೈತರ ಮನೆಗಳಿಗೆ ರಾಹುಲ್ ಭೇಟಿ ನೀಡಲಿದ್ದು. ನಂತರ ನಗರದ ವಿ.ಸಿ. ಫಾರಂನಲ್ಲಿ ರೈತರ ಜತೆ ಸಂವಾದ ನಡೆಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳು ಹಾಗೂ ಪಕ್ಷದ ಮುಖಂಡರ ಜತೆ ರಾಹುಲ್ ಚರ್ಚೆ ನಡೆಸಲಿದ್ದು, ಸಂಜೆ ಬೆಂಗಳೂರಿಗೆ ತೆರಳಿ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯರ ಜತೆ ಚರ್ಚೆ ನಡೆಸಲಿದ್ದಾರೆ.
ಬಳಿಕ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳ ಸಿಇಒಗಳ ಸಭೆಯಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದು, ನಂತರ ಪಕ್ಷದ ಮುಖಂಡರ ಜತೆ ಚರ್ಚೆ ನಡೆಸುತ್ತಾರೆ. ದಿನಾಂಕ 10ರಂದು ರಾಣೆಬೆನ್ನೂರಿಗೆ ತೆರಳಿ ಅಲ್ಲಿ 9 ಕಿ.ಮೀ. ಕಾಲ್ನಡಿಗೆ ಮೂಲಕ 3 ಹಳ್ಳಿಗಳಿಗೆ ಭೇಟಿ ನೀಡಲಿದ್ದು, ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ಆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇದೇ ಕಾರಣಕ್ಕಾಗಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಾ ಜಿ.ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಚೆಲ್ಲಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಸೇರಿ ಹಲವರು ವಿ.ಸಿ. ಫಾರಂಗೆ ಭೇಟಿ ನೀಡಿ ಪರಿಶೀಲಿಸಿದರು.ಮಧ್ಯಾಹ್ನ ವಿ.ಸಿ. ಫಾರಂಗೆ ಆಗಮಿಸಿದ ಅವರು ಸಂವಾದ ನಡೆಸುವ ಸಲುವಾಗಿ ಸೂಕ್ತ ಸ್ಥಳದ ಪರಿಶೀಲನೆ ನಡೆಸಿದರು.
ಸಾಲ ಮನ್ನಾಗೆ ಚಿಂತನೆ
ಮದ್ದೂರು: ರೈತರ ಸಾಲ ಮನ್ನಾ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು. ಮಂಡ್ಯಕ್ಕೆ ತೆರಳುವ ಮುನ್ನ ಶಿವಪುರದಲ್ಲಿ ಮಾತನಾಡಿದ ಅವರು, ರೈತರು ಖಾಸಗಿ ಲೇವಾದೇವಿದಾರರಿಂದ ಪಡೆಯುವ ಸಾಲಕ್ಕೆ ಅಧಿಕ ಬಡ್ಡಿ ವಿಧಿಸುತ್ತಿರುವುದು ಕಂಡು ಬಂದಿರುವುರಿಂದ ಲೇವಾದೇವಿ ದಾರರಿಗೆ ಕಡಿವಾಣ ಹಾಕಲು ಸರ್ಕಾರ ಹೊಸ ಕಾನೂನು ರೂಪಿಸಲು ಚಿಂತನೆ ನಡೆಸುತ್ತಿದೆ ಎಂದರು. ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳಲ್ಲಿ 4 ಪ್ರಾರಂಭವಾಗಿವೆ. ಮೈಷುಗರ್ ಕಾರ್ಖಾನೆಗೆ ಸರ್ಕಾರ ಕೋಟಿಗಟ್ಟಲೆ ಹಣ ನೀಡಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವುದರಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


