ರಾಜಕೀಯ

ಪ್ರತಿಪಕ್ಷಗಳ ಮಾತು ಕೇಳಿಸಿಕೊಳ್ಳಲಿದ್ದರೆ ಜಿಎಸ್ ಟಿ ಮಸೂದೆ ಅಂಗೀಕಾರ ಆಗಲ್ಲ: ಜೈರಾಮ್ ರಮೇಶ್

ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳುವವರೆಗೂ ಸಂಸತ್ ನಲ್ಲಿ ಜಿ.ಎಸ್.ಟಿ ಮಸೂದೆ ಗೆ ಬೆಂಬಲ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಪ್ರತಿಪಕ್ಷಗಳ ಮಾತು ಕೇಳಿಸಿಕೊಳ್ಳಲಿದ್ದರೆ ಜಿಎಸ್ ಟಿ ಮಸೂದೆ ಅಂಗೀಕಾರ ಆಗಲ್ಲ: ಜೈರಾಮ್ ರಮೇಶ್
ಜೈರಾಮ್ ರಮೇಶ್ (ಸಂಗ್ರಹ ಚಿತ್ರ)
Published On :

ಕೋಲ್ಕತ್ತ: ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳುವವರೆಗೂ ಸಂಸತ್ ನಲ್ಲಿ ಜಿಎಸ್ ಟಿ ಮಸೂದೆ ಗೆ ಬೆಂಬಲ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ನಮ್ಮ ರಾಜಕೀಯ ವ್ಯವಸ್ಥೆ ಪರಸ್ಪರ ವಿನಿಮಯದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ, ಇದನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅರ್ಥ ಮಾಡಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೂ ಈ ವಿಷಯವನ್ನು ಅರ್ಥ ಮಾಡಿಕೊಳ್ಳಲಿದ್ದಾರೆ ಎಂದು ಜೈರಾಮ್ ರಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಯಾರಿಸಿರುವ ಜಿ.ಎಸ್.ಟಿ ಮಸೂದೆ ಅಂಗೀಕಾರವಾಗಬೇಕೆಂಬ ಷರತ್ತು ವಿಧಿಸಿದರೆ ಅದು ಸಾಧ್ಯವಿಲ್ಲ, ಕೆಲ ಬದಲಾವಣೆಗಳನ್ನು ಅಗತ್ಯವಾಗಿ ಮಾಡಬೇಕಿದೆ. ಜಿ.ಎಸ್.ಟಿ ಅಂಗೀಕಾರವಾಗುವುದು ಸರ್ಕಾರದ ಕೇಳಿಸಿಕೊಳ್ಳುವ ಸಾಮರ್ಥ್ಯ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.