ರಾಜಕೀಯ

ಮೋದಿ ಸರ್ಕಾರ ಮೀಸಲಾತಿ ಹಿಂಪಡೆಯಲು ಯತ್ನಿಸುತ್ತಿದೆ: ಮಾಯಾವತಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡವರ ವಿರುದ್ಧವಾಗಿದ್ದು, ಮೀಸಲಾತಿಯನ್ನು ರದ್ದುಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.

ಮೋದಿ ಸರ್ಕಾರ ಮೀಸಲಾತಿ ಹಿಂಪಡೆಯಲು ಯತ್ನಿಸುತ್ತಿದೆ: ಮಾಯಾವತಿ
ಮಾಯಾವತಿ
Published On :

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡವರ ವಿರುದ್ಧವಾಗಿದ್ದು, ಮೀಸಲಾತಿಯನ್ನು ರದ್ದುಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ. 
ಬಿಹಾರದ ಬಂಕಾದಲ್ಲಿ ವಿಧಾನಸಭಾ ಚುನಾವಣೆ ಪ್ರಚಾರ ಕೈಗೊಂಡು ಮಾತನಾಡಿದ ಮಾಯಾವತಿ,  ಮೋದಿ ಸರ್ಕಾರ ಮೀಸಲಾತಿಯನ್ನು ರಾಜಕೀಯಗೊಳಿಸಿ ಅದನ್ನು ಸಂಪೂರ್ಣವಾಗಿ ತೆಗೆದುಹಾಕಲು ಯತ್ನಿಸುತ್ತಿದೆ. ಒಂದು ವೇಳೆ ಮೀಸಲಾತಿಯನ್ನು ರದ್ದುಗೊಳಿಸಿದರೆ ದೇಶಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.  
"ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಮೋದಿ ಸರ್ಕಾರ ಹಿಂಪಡೆಯಲು ಯತ್ನಿಸಿದರೆ, ದೇಶ ಹಿಂದೆಂದೂ ಕಾಣದಂತಹ ಹೋರಾಟವನ್ನು ಪ್ರಾರಂಭಿಸಬೇಕಾಗುತ್ತದೆ" ಎಂದು ಮಾಯಾವತಿ ಹೇಳಿದ್ದಾರೆ. ಆರ್.ಎಸ್.ಎಸ್ ನ ಮುಖಂಡ ಮೋಹನ್ ಭಾಗವತ್ ಇತ್ತೀಚೆಗಷ್ಟೇ ಮೀಸಲಾತಿ ಕುರಿತಾಗಿ ಹೇಳಿಕೆ ನೀಡಿ, ಈ ಸೌಲಭ್ಯದ ಬಗ್ಗೆ ಮತ್ತೆ ಪರಿಶೀಲನೆ ನಡೆಸಬೇಕಿದೆ ಎಂದು ಹೇಳಿದ್ದರು.
ಮೋಹನ್ ಭಾಗವತ್ ಅವರ ಹೇಳಿಕೆ ನಂತರ ದೇಶಾದ್ಯಂತ ಮೀಸಲಾತಿ ಮರುಪರಿಶೀಲನೆ ಬಗ್ಗೆ ಚರ್ಚೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.