ಸಿದ್ದರಾಮಯ್ಯ ಸಿಎಂ ಆಗಿದ್ದು ಸಾಕು ನಮಗೆ ದಲಿತ ಸಿಎಂ ಬೇಕು: ರಾಹುಲ್ ಗಾಂಧಿಗೆ ಮನವಿ
ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ಮುಖಂಡರನ್ನು ಸಿಎಂ ಮಾಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ...

ಹಾವೇರಿ: ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ಮುಖಂಡರನ್ನು ಸಿಎಂ ಮಾಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಚಲವಾದಿ ನಾರಾಯಣಸ್ವಾಮಿ ಮನವಿ ಪತ್ರ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯನವರ ಜನಪ್ರಿಯ ಯೋಜನೆಗಳಿಂದಾಗಿ ಪಕ್ಷಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ರಾಹುಲ್ ಗಾಂಧಿಗೆ ಸಲ್ಲಿಸಿರುವ ಪತ್ರದಲ್ಲಿ ಆರೋಪಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ, ಅಲ್ಲದೇ ಸಿಎಂ ಆಗಿ ಸಿದ್ದರಾಮಯ್ಯ ಎರಡೂವರೆ ವರ್ಷ ಕಾಲ ಕಳೆದಿದ್ದಾರೆ, ಇನ್ನು ಉಳಿದ ಎರಡೂ ವರೆ ವರ್ಷ ದಲಿತ ಸಿಎಂ ಬೇಕು ಎದು ಮನವಿ ಮಾಡಿದ್ದಾರೆ.
ಅಂಬೇಡ್ಕರ್ ಅವರ 125ನೇ ಜನ್ಮ ದಿನದಂದು ದಲಿತ ಸಿಎಂ ಅನ್ನು ನಿಯೋಜಿಸಬೇಕೆಂದು ಮನವಿ ಪತ್ರದಲ್ಲಿ ವಿನಂತಿಸಿಕೊಳ್ಳಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ, ಪರಮೇಶ್ವರ್ ಯಾವುದೇ ದಲಿತ ಮುಖಂಡರಿಗೆ ಸಿಎಂ ಪಟ್ಟ ಕೊಡಬಹುದಾಗಿದೆ. ಅದಕ್ಕೂ ಮೊದಲು ಸಿಎಂ ಹುದ್ದೆಯಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯನ್ನು ನೇಮಕ ಮಾಡದಿದ್ದರೆ, ಕಾಂಗ್ರೆಸ್ ಪಕ್ಷ ದಲಿತರ ಆಕ್ರೋಶಕ್ಕೆ ಬಲಿಯಾಗಬೇಕಾಗುತ್ತದೆ ಎಂದು ಚಲವಾದಿ ಸಂಘಟನೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


