ರಾಜಕೀಯ

ಕುತೂಹಲ ಕೆರಳಿಸಿದ ಕೃಷ್ಣ ದೆಹಲಿ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ...

ಕುತೂಹಲ ಕೆರಳಿಸಿದ ಕೃಷ್ಣ ದೆಹಲಿ ಭೇಟಿ
ಎಸ್.ಎಂ. ಕೃಷ್ಣ
Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಗುರುವಾರ ದೆಹಲಿಗೆ ಪ್ರಯಾಣ ಬೆಳೆಸಲಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಕೆಪಿಸಿಸಿ ಅಧ್ಯಕ್ಷ .ಜಿ.ಪರಮೇಶ್ವರ್ ಅವರು ಮಂಗಳವಾರವಷ್ಟೇ ದೆಹಲಿಗೆ ತೆರಳಿ ವಾಪಸಾದ ಮಾರನೇ ದಿನವೇ ಕೃಷ್ಣ ಅವರು ವರಿಷ್ಠರ ಭೇಟಿಗೆ ತೆರಳುತ್ತಿರುವುದು ಕುತೂಹಲ ಕೆರಳಿಸಿದೆ. ಈ ಭೇಟಿ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಲ್ಲದೆ ಅಹ್ಮದ್ ಪಟೇಲ್, ಅಂಬಿಕಾ ಸೋನಿ, ಗುಲಾಂ ನಬಿ ಅಜಾದ್ ಸೇರಿದಂತೆ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. 
ಇತ್ತೀಚೆಗೆ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮತ್ತು ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ನೀಡಿದ ಹೇಳಿಕೆಗಳೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಭೇಟಿ ಸಂದರ್ಭದಲ್ಲಿ ಸೋನಿಯಾಗಾಂಧಿ ಅವರಿಗೆ ದೂರು ನೀಡಿದ್ದರು. 
ಈ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ಕುರಿತು ಕೃಷ್ಣ ನೀಡುವ ಅಭಿಪ್ರಾಯಗಳು ಮುಂದಿನ ರಾಜಕೀಯ ಬೆಳವಣಿಗೆಗಳನ್ನು ನಿರ್ಧರಿಸಲಿವೆ. ಈ ಮಧ್ಯೆ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಎಂ.ವಿ.ರಾಜಶೇಖರನ್ ಅವರು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ಮತ್ತೊಂದು ಬೆಳವಣಿಗೆ ಆಗಿದೆ. ಪಕ್ಷದೊಳಗೆ `ಗುಸು ಗುಸು' ಹೆಚ್ಚಾಗುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.