ರಾಜಕೀಯ

ಲಲಿತ್ ಮೋದಿ ಅವರನ್ನು ಯಾವಾಗ ವಾಪಸ್ ಕರೆತರುತ್ತೀರಿ? ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

ಲಲಿತ್ ಮೋದಿ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕ ರಣ್ ದೀಪ್ ಸಿಂಗ್ ಸುರ್ಜೆವಾಲ ಮಾತನಾಡಿದ್ದು ಲಲಿತ್ ಮೋದಿ ಅವರನ್ನು ಯಾವಾಗ ಭಾರತಕ್ಕೆ ವಾಪಸ್ ಕರೆ ತರುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಲಲಿತ್ ಮೋದಿ ಅವರನ್ನು ಯಾವಾಗ ವಾಪಸ್ ಕರೆತರುತ್ತೀರಿ? ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ
ರಣ್ ದೀಪ್ ಸಿಂಗ್ ಸುರ್ಜೆವಾ
Published On :

ನವದೆಹಲಿ: ಚರ್ಚೆಯಿಂದ ದೂರವಾಗಿದ್ದ ಲಲಿತ್ ಮೋದಿ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕ ರಣ್ ದೀಪ್ ಸಿಂಗ್ ಸುರ್ಜೆವಾಲ ಮಾತನಾಡಿದ್ದು ಲಲಿತ್ ಮೋದಿ ಅವರನ್ನು ಯಾವಾಗ ಭಾರತಕ್ಕೆ ವಾಪಸ್ ಕರೆ ತರುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ಅವರನ್ನು ಭಾರತಕ್ಕೆ ವಾಪಸ್ ಕರೆತರುವ ಬಗ್ಗೆ ಕೇಂದ್ರ ಸರ್ಕಾರ ಕಾಲಮಿತಿಯನ್ನು ತಿಳಿಸಬೇಕಿದೆ.  ಈ ವಿಷಯದ ಬಗ್ಗೆ ಸಂಸತ್ ನ ಒಳಗೆ ಹಾಗೂ ಹೊರಗೆ ಚರ್ಚೆ ನಡೆಸಲು ಕಾಂಗ್ರೆಸ್ ಸಿದ್ಧವಿದೆ ಎಂದು ಸುರ್ಜೆವಾಲ ಮಾಧ್ಯಮ ವರದಿಗಾರರಿಗೆ ತಿಳಿಸಿದ್ದಾರೆ.
ಯುಪಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ, ಲಲಿತ್ ಮೋದಿ ಅವರ ಗಡಿಪಾಡಿಗೆ ಆಗ್ರಹಿಸಿ ಬ್ರಿಟೀಷ್ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಲಲಿತ್ ಮೋದಿ ಅವರನ್ನು ವಾಪಸ್ ಕರೆತರಲು ಯುಪಿಎ ಸರ್ಕಾರ ಸಿದ್ಧವಿತ್ತು ಎಂದು ಸುರ್ಜೆವಾಲ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.