ನನ್ನ ಹಾಗೂ ಪರಮೇಶ್ವರ ನಡುವೆ ಭಿನ್ನಾಭಿಪ್ರಾಯ ಇಲ್ಲ: ಸಿಎಂ
ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಪರಮೇಶ್ವರ ಅವರನ್ನು ಅಭಿನಂದಿಸಲು ಇಂದು ಅರಮನೆ ಮೈದಾನದಲ್ಲಿ ಸಾರ್ಥಕ ಸಮಾವೇಶ ನಡೆಸಲಾಯಿತು. ಈ ವೇಳೆ ಪರಮೇಶ್ವರ ಅವರನ್ನು ಅಭಿನಂದಿಸಿ ಮಾತನಾಡಿದ ಸಿಎಂ, ವಿಧಾನಸಭೆ ಚುನಾವಣೆಯಿಂದ ಇದುವರೆಗೂ ಇಬ್ಬರೂ ಹೊಂದಾಣಿಕೆಯಿಂದ ಕೆಲಸ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯ ಯಾವುದೇ ಭಿನ್ನಾಭಿಪ್ರಾ ಇಲ್ಲ ಎಂದರು.
ಪರಮೇಶ್ವರ ಅವರು ಕಾಂಗ್ರೆಸ್ ಗೆಲುವಿಗಾಗಿ 'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಇದರಿಂದ ರಾಜ್ಯದಲ್ಲಿ ಬದಲಾವಣೆಯ ಹಾಳಿ ಬೀಸಲು ಪ್ರಾರಂಭಿಸಿತು. ಇದಕ್ಕೂ ಮುನ್ನ ನಡೆಸಿದ ಬಳ್ಳಾರಿ ಪಾದಯಾತ್ರೆಯೂ ನಮ್ಮ ಗೆಲುವಿಗೆ ಕಾರಣವಾಯಿತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


