ರಾಜಕೀಯ

ಮಹದಾಯಿಗೆ ಪರಿಹಾರ: ಗೌಡರಿಗೆ ಪ್ರಧಾನಿ ಭರವಸೆ

ಮಹದಾಯಿ ಯೋಜನೆ ಅನುಷ್ಠಾನ ಸಂಬಂಧ ಶೀಘ್ರದಲ್ಲಿಯೇ ತಾವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ...

ಮಹದಾಯಿಗೆ ಪರಿಹಾರ: ಗೌಡರಿಗೆ ಪ್ರಧಾನಿ ಭರವಸೆ
ಎಚ್.ಡಿ.ದೇವೇಗೌಡ
Published On :
ಬೆಳಗಾವಿ: ಮಹದಾಯಿ ಯೋಜನೆ ಅನುಷ್ಠಾನ ಸಂಬಂಧ ಶೀಘ್ರದಲ್ಲಿಯೇ ತಾವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ``ನಾನು ಈ ಸಂಬಂಧವಾಗಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪತ್ರಕ್ಕೆ ಅವರಿಂದ ಉತ್ತರ ಬಂದಿದ್ದು, ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ'' ಎಂದು ಮಾಜಿ
ಪ್ರಧಾನಿ ಎಚ್.ಡಿ.ದೇವೇಗೌಡ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಕಳಸಾಬಂಡೂರಿ ನಾಲಾಯೋಜನೆ ನೀರು ಹಂಚಿಕೆ ವಿವಾದ ನ್ಯಾಯಧಿಕರಣದಲ್ಲಿದೆ. ಈ ವಿವಾದ ಇತ್ಯರ್ಥಗೊಳ್ಳುವವರೆಗೆ ಉತ್ತರ ಕರ್ನಾಟಕ ಭಾಗದ ಜನತೆಗಾಗಿ ಕುಡಿಯುವ ಉದ್ದೇಶಕ್ಕಾಗಿ 3.56 ಟಿಎಂಸಿ ನೀರು ಬಿಡುಗಡೆಗೆ ನ್ಯಾಯಾಧಿಕರಣ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು. ಮಹದಾಯಿ ಮತ್ತು ಕಳಸಾ ಬಂಡೂರಿಯೋಜನೆಗಳ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ರಾಜಕೀಯ ಮಾಡುತ್ತಿವೆ. ಈ ಎರಡೂ ಪಕ್ಷಗಳು ಮಹದಾಯಿ ಯೋಜನೆ ವಿಚಾರವನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ. ಇದು ರಾಜ್ಯ ಹಿತದೃಷ್ಟಿ ಯಿಂದ ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.