ಸಚಿವ ಸ್ಥಾನ ಬೇಕೆಂದೇನಿಲ್ಲ
ನನಗೆ ಸಚಿವ ಸ್ಥಾನವೇ ಬೇಕೆಂದೇ ನಿಲ್ಲ. ಈ ವಿಚಾರವಾಗಿ ನಾನು ಮಾಡುವುದೂ ಸರಿಯಲ್ಲ. ಸಂಪುಟ ವಿಸ್ತರಣೆ ಮತ್ತು ಯಾರು ಸೇರಬೇಕು ಎಂಬುದರ...

Published On :
ಶಿವಮೊಗ್ಗ: ``ನನಗೆ ಸಚಿವ ಸ್ಥಾನವೇ ಬೇಕೆಂದೇ ನಿಲ್ಲ. ಈ ವಿಚಾರವಾಗಿ ನಾನು ಮಾಡುವುದೂ ಸರಿಯಲ್ಲ. ಸಂಪುಟ ವಿಸ್ತರಣೆ ಮತ್ತು ಯಾರು ಸೇರಬೇಕು ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾ ರೆ. ವಿಧಾನಸಭಾ ಅಧ್ಯಕ್ಷನಾಗಿ ನಾನು ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ'' ಎಂದು ಕಾಗೋಡು ತಿಮ್ಮಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗೆ ಸಂಬಂಧಿಸಿದ ವಿಚಾರ. ಈ ಬಗ್ಗೆ ಅವರ ಇಚ್ಚಾಸಕ್ತಿ ಅನುಸಾರ ಅವರು ಕ್ರಮಕೈಗೊಳ್ಳುತ್ತಾರೆ. ಪಕ್ಷದಲ್ಲಿ ಹೊರಗಿನವರು, ಮೂಲದವರು ಎಂಬುದು
ಇರಲ್ಲ. ಈ ಬಗ್ಗೆ ಮಾತನಾಡಲು ತಾವು ಯಾವುದೇ ಪಕ್ಷದಲ್ಲಿಲ್ಲ ಎಂದ ಅವರು, ಸಚಿವ ಸ್ಥಾನದ ಬಗ್ಗೆ ತಮಗೆ ಆಸಕ್ತಿಯೂ ಇಲ್ಲ ಎಂದರು. ವ್ಯಾಪ್ತಿ ಮೀರಿ ಅಧಿಕಾರಿಗಳ ವರ್ತನೆ: ಪಾರಂಪರಿಕ ಅರಣ್ಯವಾಸಿಗಳ ಹಿತಕಾ ಯಲು ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಅಧಿಕಾರಿಗಳು ಇಚ್ಚಾಸಕ್ತಿ ಪ್ರದರ್ಶಿಸುವ ಅಗತ್ಯವಿದೆ. ಸಾಗುವಳಿ
ದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಕ್ಕಾಗಿ ತಾವು ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತುತ್ತಲೇ ಬಂದಿದ್ದು ಇದಕ್ಕೆ ಸರ್ಕಾರ ಸ್ಪಂದಿಸಿದೆ ಎಂದು ಹೇಳಿದರು.
ಡಿಸೆಂಬರ್ ಒಳಗಾಗಿ ಎಲ್ಲ ಅರ್ಜಿಗಳನ್ನು ಇತ್ಯರ್ಥ ಪಡಿಸಿ ಸಾಗುವಾಳಿದಾರರಿಗೆ ಹಕ್ಕು ಪತ್ರ ಕೊಡಲು ಅಧಿಕಾರಿಗಳಿಗೆ ಆದೇಶ ನೀಡಿದೆ. ಆ ಸಂಬಂಧ ಎಲ್ಲ ಅಧಿಕಾರಿಗಳ ಜೊತೆ ಚರ್ಚೆ ಮತ್ತು ಸಮಾಲೋಚ ನಾ ಸಭೆಗಳು ನಡೆಯುತ್ತಿದೆ. ಹೀಗಿದ್ದರೂ ಅಧಿಕಾರಿಗಳು ಎಚ್ಚೆತ್ತು ಕೊಂಡಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಸುಪ್ರೀಂ ಆದೇಶವನ್ನೇ ಮುಂದಿಟ್ಟು ಕೊಂಡು ರಾಜ್ಯಾಂಗ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


