ರಾಜಕೀಯ

ಬಿಬಿಎಂಪಿ ಮೈತ್ರಿ: ದೇವೇಗೌಡರ ನಿವಾಸಕ್ಕೆ ಪರಮೇಶ್ವರ, ರಾಮಲಿಂಗಾರೆಡ್ಡಿ ಭೇಟಿ

ಬೃಹತ್ ಬೆಂಗಳೂರು ಮಾಹನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಈ...

ಬಿಬಿಎಂಪಿ ಮೈತ್ರಿ: ದೇವೇಗೌಡರ ನಿವಾಸಕ್ಕೆ ಪರಮೇಶ್ವರ, ರಾಮಲಿಂಗಾರೆಡ್ಡಿ ಭೇಟಿ
ಪರಮೇಶ್ವರ
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಾಹನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, ಚರ್ಚಿಸಿದ್ದಾರೆ.

ದೇವೇಗೌಡರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಬಿಬಿಎಂಪಿ ಮೈತ್ರಿ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜತೆಯೂ ಮೈತ್ರಿ ಬಗ್ಗೆ ಚರ್ಚಿಸಿ, ಅಧಿಕಾರ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದರು. ಅಲ್ಲದೆ ಈ ಬಗ್ಗೆ ಮತ್ತೊಮ್ಮೆ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸಲಾಗುವುದು ಎಂದು ಪರಮೇಶ್ವರ ತಿಳಿಸಿದರು.

ಇದಕ್ಕೂ ಮುನ್ನ  ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್,  ಹಾಗೂ ಜೆಡಿಎಸ್ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಮಹತ್ವದ ಮಾತುಕತೆ ನಡೆಸಿದರು.

ಮಾತುಕತೆ ಮುಕ್ತಾಯವಾದ ಕೂಡಲೇ ಜಮೀರ್ ಅಹ್ಮದ್ ದೇವೇಗೌಡರ ನಿವಾಸದತ್ತ ಹೊರಟ ಬೆನ್ನಲ್ಲೇ, ಪರಮೇಶ್ವರ್ ಕೂಡಾ ಗೌಡರ ನಿವಾಸಕ್ಕೆ ತೆರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.