ಬರ: ಹೈಕಮಾಂಡ್‍ಗೆ "ಕೈ" ವರದಿ
ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಬರ ಪರಿಸ್ಥಿತಿ ಬಗ್ಗೆ ಎಐಸಿಸಿಗೆ ವರದಿ ನೀಡಲು ಸೋಮವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿಪರಮೇಶ್ವರ ಅವರು ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವರದಿಕೊಡುವಂತೆ ಸೂಚಿಸಿದ್ದಾರೆ. ಲೋಕಸಭಾ ಕಲಾಪದಲ್ಲಿ ಅವರುಈ ವಿಚಾರ ಪ್ರಸ್ತಾಪ ಮಾಡಿ ಕೇಂದ್ರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ಸಕ್ರಿಯರಾಗಿ ಮಾಹಿತಿ ಸಂಗ್ರಹಿಸಿ ಕೆಪಿಸಿಸಿಗೆ ವರದಿ ನೀಡಬೇಕು. ನಾವು ಈ ಮಾಹಿತಿಯನ್ನು ವರಿಷ್ಠರಿಗೆ ರವಾನೆ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಸಮರ್ಪಕವಾಗಿ ನಡೆದಿಲ್ಲ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಈಗ ಸದಸ್ಯತ್ವ ನೋಂದಣಿ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಎಲ್ಲರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸಲಹೆ ನೀಡಿದರು.
ರಮೇಶ್ ವಿರುದ್ಧ ಆಕ್ರೋಶ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಪಿ. ರಮೇಶ್ ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಸೋಲಿಗೆ ಅವರು ಬೆಂಬಲ ನೀಡಿದ್ದಾರೆ. ಹೀಗಾಗಿ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


