ರಾಜಕೀಯ

ಡಿಕೆಶಿ ವಿಚಾರಣೆಗೆ ಸುಪ್ರೀಂ ಅಸ್ತು

ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ವಿವಾದದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ರದ್ದು ಮಾಡಬೇಕೆಂದು ಸಲ್ಲಿಸಿದ್ದ ಮನವಿಗೆ ಕರ್ನಾಟಕ...

ಡಿಕೆಶಿ ವಿಚಾರಣೆಗೆ ಸುಪ್ರೀಂ ಅಸ್ತು
ಡಿ.ಕೆ.ಶಿವಕುಮಾರ್
Published On :

ನವದೆಹಲಿ: ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ವಿವಾದದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ರದ್ದು ಮಾಡಬೇಕೆಂದು ಸಲ್ಲಿಸಿದ್ದ ಮನವಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತೆರವುಗೊಳಿಸಿದೆ. ಪ್ರಕರಣವನ್ನು ಶೀಘ್ರವಾಗಿ ವಿಚಾರಣೆ ನಡೆಸುವಂತೆ ಕೋರ್ಟ್ ಹೈಕೋರ್ಟ್‍ಗೆ ಆದೇಶ ನೀಡಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆ ಗಾಗಿ ಸಚಿವರು ಪಡೆದಿರುವ ತಡೆಯಾಜ್ಞೆ ಮುಂದುವರಿಯಲಿದೆ. ಸಿ.ಜೆ. ಎಚ್.ಎಲ್.ದತ್ತು ನೇತೃತ್ವದ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ತ್ವರಿತವಾಗಿ ಪ್ರಕರಣ ರದ್ದು ಮಾಡಬೇಕೋ ಬೇಡವೋ ಎಂಬುದನ್ನು ಇತ್ಯರ್ಥಪಡಿಸುವಂತೆಯೂ ನ್ಯಾಯಪೀಠ ಸೂಚಿಸಿತು.

ಬೆನ್ನಿಗಾನಹಳ್ಳಿಯಲ್ಲಿಯಲ್ಲಿನ 4 ಎಕರೆ 20 ಗುಂಟೆ ಭೂಮಿ ಡಿನೋಟಿಫಿಕೇಶನ್‍ನಲ್ಲಿ ಅಕ್ರಮ ನಡೆದಿರುವ ಬಗ್ಗೆ 2012ರಲ್ಲಿ ಬಿ.ಕೆ.ಶ್ರೀನಿವಾಸನ್ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಅವರು ಅದನ್ನಾಧರಿಸಿ ಎಫ್ ಐಆರ್ ದಾಖಲಿಸಿ ವಿಚಾರಣೆ ಆರಂಭಿಸಿದ್ದರು. ಡಿ.ಕೆ. ಶಿವಕುಮಾರ್ ಪ್ರಕರಣ ರದ್ದು ಮಾಡುವಂತೆ ಕೋರಿ ಮತ್ತುಲೋಕಾಯುಕ್ತ ವಿಚಾರಣೆಗೆ ತಡೆ ಕೋರಿ ಕರ್ನಾಟಕ ಹೈಕೋರ್ಟಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. 2013ರ ಏಪ್ರಿಲ್‍ನಲ್ಲಿ ಮಧ್ಯಾಂತರ ಆದೇಶ ನೀಡಿದ್ದ ಹೈಕೋರ್ಟ್ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿತ್ತು. ಡಿ. ಕೆ. ಶಿವಕುಮಾರ್ ಸುಪ್ರೀಂಕೋರ್ಟಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿ ಆದೇಶದ ವಿರುದ್ಧ ತಡೆಯಾಜ್ಞೆ ಪಡೆದಿದ್ದರು. ಸೋಮವಾರ ವಿಚಾರಣೆ ನಡೆಸಿ ದ ನ್ಯಾಯಪೀಠವು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ದ ತಡೆಯಾಜ್ಞೆ ತೆರವುಗೊಳಿಸಿದೆ. ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ಹಾಗೆ ಇದೆ. ಇದೀಗ ಪ್ರಕರಣ ರದ್ದುಮಾಡ ಬೇಕೋ ಬೇಡವೋ ಎಂಬುದನ್ನು ಹೈಕೋರ್ಟ್ ನಿರ್ಧರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.