ಬೆಂಗಳೂರು ಶಾಸಕರನ್ನೇ ಬೆಂಗಳೂರು ಮಂತ್ರಿ ಮಾಡಿ: ಸಿಎಂಗೆ ಸಿಲಿಕಾನ್ ಸಿಟಿ ಶಾಸಕರ ಮನವಿ
ಬೆಂಗಳೂರಿನ ಶಾಸಕರಿಗೇ ಬೆಂಗಳೂರು ಮಂತ್ರಿ ಪದವಿ ನೀಡಿ ಎಂದು 13 ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ಶಾಸಕರಿಗೇ ಬೆಂಗಳೂರು ಮಂತ್ರಿ ಪದವಿ ನೀಡಿ ಎಂದು 13 ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿಗೆ ಪ್ರತ್ಯೇಕ ಸಚಿವರೊಬ್ಬರ ನೇಮಕ ಸಂಬಂಧ ಸಿಎಂಗೆ ಪತ್ರ ಬರೆದಿರುವ ಶಾಸಕರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ರೋಶನ್ ಬೇಗ್, ಕೃಷ್ಣಪ್ಪ, ಮುನಿರತ್ನ, ಎಸ್.ಟಿ. ಸೋಮಶೇಖರ್, ಶಿವಣ್ಣ, ಬೈರತಿ ಬಸವರಾಜ್, ಪ್ರಿಯಾಕೃಷ್ಣ, ಎನ್.ಎ.ಹ್ಯಾರೀಶ್ ಅವರು ಹೊರಗಿನವರಿಗೆ ಸಚಿವ ಸ್ಥಾನ ನೀಡುವುದು ಬೇಡ ಎಂದಿದ್ದಾರೆ.
ಬಿಬಿಎಂಪಿ ಚುನಾವಣೆ ನಂತರ ಬೆಂಗಳೂರಿಗೇ ಒಬ್ಬ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.
ಬಿಬಿಎಂಪಿ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ವೇಳೆ ಉದ್ಯಾನ ನಗರಿಯ ಅಭಿವೃದ್ಧಿ ಕನಸು ಸಾಕಾರಗೊಳಿಸಲು ಬೆಂಗಳೂರು ನಗರ ಎಂಬ ಸ್ವತಂತ್ರ ಖಾತೆಯನ್ನು ಹುಟ್ಟುಹಾಕಿ ಒಬ್ಬ ಸಚಿವರನ್ನು ನೇಮಕ ಮಾಡಲಾಗುವುದು ಸಿಎಂ ತಿಳಿಸಿದ್ದರು. ಇದೀಗ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಶಾಸಕರನ್ನೇ ಮಂತ್ರಿ ಮಾಡಿ ಎಂದು ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


