ಸಂಪುಟ ವಿಸ್ತರಣೆ ಬಿಕ್ಕಟ್ಟಿಲ್ಲ: ಸಿಎಂ
ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಆದರೆ, ಈ ವಿಚಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು...

ಮೈಸೂರು: ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಆದರೆ, ಈ ವಿಚಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಒಂದು ವೇಳೆ ಬಿಕ್ಕಟ್ಟು ಉದ್ಭವಿಸಿದರೆ ಅದನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದರು. ದೆಹಲಿ ಭೇಟಿ ವೇಳೆ ಸಚಿವ ಸಂಪುಟ ಪುನರ್ ರಚನೆ ಸಂಬಂಧ ಹೈಕಮಾಂಡ್‍ನೊಂದಿಗೆ ಚರ್ಚಿಸುತ್ತೇನೆ. ಬಳಿಕ ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರ ವಿವಾದಾತ್ಮಕ ಹೇಳಿಕೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ``ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ವ್ಯಕ್ತಿಗತವಾಗಿ ನಾನೂ ಮೂಢನಂಬಿಕೆ ವಿರೋಧಿಸುತ್ತೇನೆ. ವೈಚಾರಿಕ ಚಿಂತನೆ ಒಪ್ಪಿಕೊಳ್ಳುತ್ತೇನೆ'' ಎಂದು ತಿಳಿಸಿದರು. ಪ್ರಗತಿ ಪರ ರೈತ ಕಡಿದಾಳ್ ಶಾಮಣ್ಣ ಅವರನ್ನು ದಸರಾ ಉದ್ಘಾಟನೆಗಾಗಿ ಆಹ್ವಾನಿಸಲಾಗಿತ್ತು. ಧಾರ್ಮಿಕ ಸಂಪ್ರದಾಯವನ್ನು ಹಿಂದಿನಿಂದಲೂ ವಿರೋಧಿಸುತ್ತಿದ್ದೇನೆಂದು ಅವರು ನಮ್ಮ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದರು.
ರಾಜ್ಯದಲ್ಲಿ ಐಐಟಿ ಸ್ಥಾಪನೆಗೆ ಮೈಸೂರು, ರಾಯಚೂರು ಹಾಗೂ ಧಾರವಾಡ ಜಿಲ್ಲೆಯ ಹೆಸರನ್ನು ಸೂಚಿಸಲಾಗಿತ್ತು. ಆದರೆ ಧಾರವಾಡಕ್ಕೆ ಸಿಕ್ಕಿದೆ. ಇದರಿಂದ ಚಿಂತೆ ಪಡುವ ಅಗತ್ಯವಿಲ್ಲ. ಧಾರವಾಡವೂ ರಾಜ್ಯದಲ್ಲೇ ಇದೆ.
-ಸಿದ್ದರಾಮಯ್ಯ ಮುಖ್ಯಮಂತ್ರಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


