ರಾಜಕೀಯ

ನಜೀಬ್ ಜಂಗ್ ಕೆಟ್ಟ ರಾಜಕೀಯ ನಾಯಕರೊಂದಿಗಿರುವ ಒಳ್ಳೆಯ ವ್ಯಕ್ತಿ: ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಂಗ್ ಅವರನ್ನು ಕೆಟ್ಟ ರಾಜಕೀಯ ನಾಯಕರನ್ನು ಹೊಂದಿರುವ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ.

ನಜೀಬ್ ಜಂಗ್ ಕೆಟ್ಟ ರಾಜಕೀಯ ನಾಯಕರೊಂದಿಗಿರುವ ಒಳ್ಳೆಯ ವ್ಯಕ್ತಿ: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್(ಸಂಗ್ರಹ ಚಿತ್ರ)
Published On :

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಅವರನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತಿದ್ದರೆ ಇತ್ತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಂಗ್ ಅವರನ್ನು ಕೆಟ್ಟ ರಾಜಕೀಯ ನಾಯಕರನ್ನು ಹೊಂದಿರುವ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ.
ನಜೀಬ್ ಜಂಗ್ ಅವರನ್ನು ವಜಾಗೊಳಿಸುವಂತೆ ಕಾಂಗ್ರೆಸ್ ಆಗ್ರಹಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ವಜಾಗೊಳಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಏಕೆಂದರೆ ನಜೀಬ್ ಜಂಗ್ ಪ್ರಧಾನಿ ಕಾರ್ಯಾಲಯದ ಸೂಚನೆಗಳನ್ನಷ್ಟೇ ಪಾಲಿಸುತ್ತಿದ್ದಾರೆ. ಅವರೊಬ್ಬ ಒಳ್ಳೆಯ ವ್ಯಕ್ತಿಯಾಗಿದ್ದರೂ ರಾಜಕೀಯ ನಾಯಕರು ಅವರನ್ನು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲ ನಾಯಕರು ಜಂಗ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ನಜೀಬ್ ಜಂಗ್ ಪ್ರಧಾನಿ ಕಾರ್ಯಾಲಯದ ಸೂಚನೆಗಳನ್ನು ಪಾಲಿಸುತ್ತಿದ್ದಾರೆ ಆದ್ದರಿಂದ ಅವರನ್ನು ವಜಾಗೊಳಿಸಿದರೂ ಯಾವುದೇ ಪ್ರಯೋಜನ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ವಜಾಗೊಳಿಸಿದರೆ ನಜೀಬ್ ಜಂಗ್ ಅವರ ನಂತರ ಬರುವ ಲೆಫ್ಟಿನೆಂಟ್ ಗೌರ್ನರ್ ಸಹ ಜಂಗ್ ಅವರಂತೆಯೇ ಕೆಲಸ ಮಾಡುತ್ತಾರೆ ಇದರಲ್ಲಿ ಬದಲಾವಣೇಯಾಗುವುದಿಲ್ಲ, ದೆಹಲಿ ವಿಷಯಗಳಲ್ಲಿ ಪ್ರಧಾನಿ ಕಾರ್ಯಾಲಯ ಮಧ್ಯಪ್ರವೇಶಿಸುವುದನ್ನು ಬಿಟ್ಟರೆ ಪರಿಸ್ಥಿತಿ ಸುಧಾರಣೆಯಾಗಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.