ಯಡಿಯೂರಪ್ಪಗೆ ಯುಗಾದಿ ಬಂಪರ್ ಗಿಫ್ಟ್: ರಾಜ್ಯ ಬಿಜೆಪಿ ಸಾರಥ್ಯ
ಮಾಜಿ ಸಿಎಂ ಹಾಗೂ ಸಂಸದ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈ ಕಮಾಂಡ್ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ. .,.

ಬೆಂಗಳೂರು: ಮಾಜಿ ಸಿಎಂ ಹಾಗೂ ಸಂಸದ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈ ಕಮಾಂಡ್ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ.
ಹಾಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಳ್ಳುವಂತೆ ಹೈಕಮಾಂಡ್ ಆದೇಶ ನೀಡಿದೆ. ಅಧಿಕಾರ ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚಿಸಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಪ್ರಹ್ಲಾದ್ ಜೋಶಿ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟ ಕಟ್ಟಲಾಗಿದೆ.
ಅಧ್ಯಕ್ಷ ಸ್ಥಾನ ಅಲಂಕರಿಸಲು ಹಲವು ಹಿರಿಯ ನಾಯಕರು ತುದಿಗಾಲಲ್ಲಿ ನಿಂತಿದ್ದರು. ಸಿ.ಟಿ ರವಿ, ಸೇರಿದಂತೆ ಹಲವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಅಂತಿಮವಾಗಿ ಯಡಿಯೂರಪ್ಪ ಅವರಿಗೆ ಅಧ್ಯಕ್ಷ ಗಾದಿ ಒಲಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


