ರಾಜಕೀಯ

ಪಕ್ಷದ ಯಾವ ಶಾಸಕರೂ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಿಲ್ಲ: ಎಚ್ ಡಿಕೆ

ನಮ್ಮ ಪಕ್ಷದ ಯಾವ ನಾಯಕರೂ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ...

ಪಕ್ಷದ ಯಾವ ಶಾಸಕರೂ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಿಲ್ಲ: ಎಚ್ ಡಿಕೆ
ಎಚ್.ಡಿ.ಕುಮಾರಸ್ವಾಮಿ
Published On :
ರಾಮನಗರ: ನಮ್ಮ ಪಕ್ಷದ ಯಾವ ನಾಯಕರೂ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅರು ಬಿಜೆಪಿ ರಾಜ್ಯಾಧ್ಯಾಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಆಪರೇಷನ್ ಕಮಲ ಶುರುವಾಗುತ್ತಿದ್ದು, ಜೆಡಿಎಸ್ ನ ಮೂವರು ಶಾಸಕರು ಬಿಜೆಪಿ ಸೇರುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಎಚ್ ಡಿಕೆ, ಜೆಡಿಎಸ್ ನ ಯಾವ ನಾಯಕರೂ ಪಕ್ಷ ತೊರೆಯುತ್ತಿಲ್ಲ ಎಂದರು.
ಮಾಗಡಿ ಶಾಸಕ ಬಾಲಕೃಷ್ಣ ಅವರು ಬಿಜೆಪಿ ಸೇರುವುದಾಗಿ ಹೇಳಿಲ್ಲ. ಈ ಕುರಿತು ಅವರೊಂದಿಗೆ ಚರ್ಚಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಆಡಳಿತ ಪಕ್ಷ ಕಾಂಗ್ರೆಸ್ ನ ಚೆನ್ನಪಟ್ಟಣ ಕ್ಷೇತ್ರದ ಶಾಸಕರಾದ ಸಿಪಿ ಯೋಗೀಶ್ವರ್, ಜೆಡಿಎಸ್ ನ ಮಾಗಡಿ ಕ್ಷೇತ್ರದ ಶಾಸಕರಾದ ಬಾಲಕೃಷ್ಣ, ನಾಗಮಂಗಲ ಕ್ಷೇತ್ರದ ಶಾಸಕರಾದ ಚೆಲುವರಾಯಸ್ವಾಮಿ ಮತ್ತು ಜೆಡಿಎಸ್ ನ ಮೇಲ್ಮನೆ ಸದಸ್ಯರಾದ ಪುಟ್ಟಣ್ಣ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.