ರಾಜಕೀಯ

ದಲಿತರು ಸಿಎಂ ಆಗೋ ಕಾಲ ಇನ್ನೂ ಬಂದಿಲ್ಲ: ಪರಮೇಶ್ವರ್

ದಲಿತರು ಮುಖ್ಯಮಂತ್ರಿ ಆಗೋ ವಿಚಾರ ಮತ್ತೆ ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಇನ್ನೂ ಬಂದಿಲ್ಲ...

ದಲಿತರು ಸಿಎಂ ಆಗೋ ಕಾಲ ಇನ್ನೂ ಬಂದಿಲ್ಲ: ಪರಮೇಶ್ವರ್
ಪರಮೇಶ್ವರ್
Published On :

ಬೆಂಗಳೂರು: ದಲಿತರು ಮುಖ್ಯಮಂತ್ರಿ ಆಗೋ ವಿಚಾರ ಮತ್ತೆ ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಇನ್ನೂ ಬಂದಿಲ್ಲ. ದಲಿತರು ದಲಿತರನ್ನೇ ಆಯ್ಕೆ ಮಾಡುವ ಕಾಲ ಬರಬೇಕಾಗಿದೆ ಎಂದರು.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್ ಅವರು, ದಲಿತರಿಗೆ ರಾಜಕೀಯ ಶಕ್ತಿ ಇನ್ನೂ ಬಂದಿಲ್ಲ. ಹಾಗಾಗಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಕೂಡಿ ಬಂದಿಲ್ಲ ಎಂದರು.

ರಾಜ್ಯದಲ್ಲಿ ದಲಿತ ಸಿಎಂ ಕುರಿತಂತೆ ಕೆಲ ತಿಂಗಳುಗಳಿಂದ ತೀವ್ರ ಚರ್ಚೆಯಾಗುತ್ತಿದೆ. ಪರಮೇಶ್ವರ್ ಅವರು ಅವಕಾಶ ಸಿಕ್ಕಿದಾಗಲೆಲ್ಲಾ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸುತ್ತಾ ಬಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.