ರಾಜ್ಯ ರಾಜಕೀಯಕ್ಕೆ ಎಸ್.ಎಂ. ಕೃಷ್ಣ ಎಂಟ್ರಿ!; ಸಿದ್ದು ನೆತ್ತಿ ಮೇಲೆ ತೂಗುಗತ್ತಿ
ಕೇಂದ್ರದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಸಿಎಂ ಎಸ್. ಎಂ ಕೃಷ್ಣ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಆಸಕ್ತಿ ...

ಬೆಂಗಳೂರು: ಕೇಂದ್ರದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಸಿಎಂ ಎಸ್. ಎಂ ಕೃಷ್ಣ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ.
ಮನಮೋಹನ್ ಸಿಂಗ್ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಎಸ್ ಎಂ ಕೃಷ್ಣ ಅವರನ್ನು ರಾಜ್ಯದ ರಾಜಕಾರಣಕ್ಕೆ ತಂದು, ನಾಯಕತ್ವ ಬದಲಿಸಲು ಹಲವು ಕಾಣದ ಕೈ ಗಳು ಕೆಲಸ ಮಾಡುತ್ತಿದ್ದು, ಕೃಷ್ಣ ಕೂಡ ಉತ್ಸುಕರಾಗಿದ್ದಾರೆ.
ರಾಜ್ಯದಲ್ಲಿ ತಾಂಡವವಾಡುತ್ತಿರುವ ಭೀಕರ ಬರಗಾಲ ಸಂಬಂಧ ಎಲ್ಲಾ ಜಿಲ್ಲೆಗಳಲ್ಲೂ ಸೂಕ್ತವಾದ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಸ್. ಎಂ. ಕೃಷ್ಣ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅವರಿಗೆ ಪತ್ರ ಬರೆದಿದ್ದರು.
ಜೊತೆಗೆ ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಸರಿಯಾದ ರೀತಿಯ ಬರ ಪರಿಹಾರ ಕಾರ್ಯ ಕೈಗೊಳ್ಳುತ್ತಿಲ್ಲ ಎಂದು ಪತ್ರದಲ್ಲಿ ಕೃಷ್ಣ ಅಸಮಧಾನ ವ್ಯಕ್ತ ಪಡಿಸಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ ಎಸ್. ಎಂ ಕೃಷ್ಣ ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಮಂಡ್ಯದಲ್ಲಿ ನಡೆದ ಒಕ್ಕಲಿಗರ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಅವರ ಪುತ್ರ ಕುಮಾರ ಸ್ವಾಮಿ ಅವರಜೊತೆ ಎಸ್. ಎಂ ಕೃಷ್ಣ ವೇದಿಕೆ ಹಂಚಿಕೊಂಡು ಪರಸ್ಪರರು ಹಾಡಿಹೊಗಳಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಇನ್ನು ತಮ್ಮ ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಿಎಂ ಸಿದ್ದರಾಮಯ್ಯಗೆ ಸಂಪುಟ ವಿಸ್ತರಣೆ ಮಾಡಲು ಸೋನಿಯಾ ಗಾಂಧಿ ಗ್ರೀನ್ ಸಿಗ್ನಲ್ ನೀಡದಿರುವುದು ಸಿದ್ದುಗೆ ಹಿನ್ನಡೆಯಾದಂತಾಗಿದೆ.
ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದ ಹಲವು ಆರೋಪಗಳು ಕೂಡ ನಾಯಕತ್ವ ಬದಲಾವಣೆಗೆ ಮತ್ತಷ್ಟು ಪೋಷಣೆ ನೀಡಿದಂತಾಗಿದೆ.
ಮಗನಿಗೆ ಅನುಕೂಲ ಮಾಡಿಕೊಡಲು ಪುತ್ರನ ಸ್ನೇಹಿತನಿಗೆ ಬಿಡಿಎ ಜಾಗ ನೀಡಿರುವುದು, ದುಬಾರಿ ವಾಚ್ ಪ್ರಕರಣ, ಎಸಿಬಿ ಸ್ಥಾಪನೆ ಈ ಎಲ್ಲಾ ಪ್ರಕರಣಗಳಿಂದ ಸಿದ್ದರಾಮಯ್ಯ ಅವರ ಕುರ್ಚಿ ಹೋಗುವ ಭಯವಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ನೆತ್ತಿಯ ಮೇಲೆ ಬದಲಾವಣೆ ಎಂಬ ತೂಗು ಗತ್ತಿ ನೇತಾಡುತ್ತಿದೆ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದಂತೆ ಇರುವ ಸಿಎಂ ಸಿದ್ದರಾಮಯ್ಯ ಬರ ಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಂಡು ಬ್ಯುಸಿಯಾಗಿದ್ದಾರೆ.
ಹಲವು ದಿನಗಳಿಂದ ಕೇಳಿ ಬರುತ್ತಿರುವ ದಲಿತ ಮುಖ್ಯಮಂತ್ರಿ ಪದವಿ ಆಕಾಂಕ್ಷಿಗಳು ಸಹ ಸಿದ್ದರಾಮಯ್ಯ ವಿರುದ್ದ ಪಿತೂರಿ ನಡೆಸಿದ್ದಾರೆ. ದಲಿತ ಸಿಎಂ ಆಕಾಂಕ್ಷಾಯಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


