ಬರದಿಂದ ಜನತೆ ಪರದಾಟ, ಗಾಲ್ಫ್ ಆಡುತ್ತಾ ಐಎಎಸ್ ಅಧಿಕಾರಿಗಳ ಮೋಜಿನಾಟ: ಎಚ್ ಡಿಕೆ ವಾಗ್ದಾಳಿ
ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳು ಹವಾನಿಯಂತ್ರಿತ ...

ಬೆಂಗಳೂರು: ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಆಯಕಟ್ಟಿನ ಸ್ಥಾನದಲ್ಲಿರುವ ಅಧಿಕಾರಿಗಳು ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಮೋಜು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ನಿರ್ವಹಣೆಯ ಉಸ್ತುವಾರಿ ವಹಿಸಬೇಕಿದ್ದ ಐಎಎಸ್ ಅಧಿಕಾರಿಗಳು ಗಾಲ್ಫ್ ಆಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಸರ್ಕಾರರ ಮೊದಲು ಅವರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮಹಾರಾಷ್ಟ್ರದಷ್ಟು ಬರ ಇಲ್ಲ ಎಂದು ಸಿಎಂ ಹಾಗೂ ಸಚಿವರ ಹೇಳಿಕೆ ನಾಚಿಕೆಗೇಡು ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


