ರಾಕೇಶ್ ಸಿದ್ದರಾಮಯ್ಯ ಹೆಸರಲ್ಲಿ ಯಕೃತ್ ಕಸಿಯೋಜನೆ ಜಾರಿಗೆ ಸಿಎಂ ಚಿಂತನೆ
ರಾಕೇಶ್ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಖಾಸಗಿ ಫೌಂಡೇಶನ್ ಅಥವಾ ಸರ್ಕಾರದ ವತಿಯಿಂದ ಯಕೃತ್ ಕಸಿಯೋಜನೆಯನ್ನು ಜಾರಿಗೊಳಿಸುವ...

ಬೆಂಗಳೂರು: ರಾಕೇಶ್ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಖಾಸಗಿ ಫೌಂಡೇಶನ್ ಅಥವಾ ಸರ್ಕಾರದ ವತಿಯಿಂದ ಯಕೃತ್ ಕಸಿಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೆಜೆಸ್ಟಿಕ್ ಬಳಿ ಇರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ 218ನೇ ಜನ್ಮ ದಿನಾಚರಣೆ ಅಂಗವಾಗಿ ಮಾಲಾರ್ಪಣೆ ಮಾಡಿದ ನಂತರ ವಾಟಾಳ್ ನಾಗರಾಜ್ ಅವರ ಮನವಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ವಾಟಾಳ್ ನಾಗರಾಜ್ ಅವರು ರಾಕೇಶ್ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಯಕೃತ್ ಕಸಿ ಯೋಜನೆ ಜಾರಿಗೊಳಿಸುವಂತೆ ಸಲಹೆ ನೀಡಿದ್ದಾರೆ.ಸರ್ಕಾರದಿಂದ ಸಾಧ್ಯವಾಗದೇ ಇದ್ದರೆ ರಾಕೇಶ್ ಫೌಂಡೇಶನ್ ಸ್ಥಾಪಿಸಿ ಅದರಿಂದಲಾದರೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ಯಕೃತ್ ಕಸಿ ಯೋಜನೆಯನ್ನು ಜಾರಿಗೊಳಿಸುವಂತೆ ಹೇಳಿದ್ದಾರೆ.
ವಾಟಾಳ್ ನಾಗರಾಜ್ ಅವರ ಸಲಹೆಗಳನ್ನು ಗಂಭೀರವಾಗಿ ಪರಿಶೀಲಿಸಲಾಗುವುದು. ಈ ಯೋಜನೆಯನ್ನು ಯಾವ ಹಂತದಲ್ಲಿ ಜಾರಿಗೊಳಿಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸುವುದಾಗಿ ಹೇಳಿದರು.
ಸಿಎಂ, ಮಹದಾಯಿ, ಕಳಸಾಬಂಡೂರಿ ಯೋಜನೆಗಾಗಿ ಹೋರಾಟ ನಡೆಸಿದ ರೈತರ ಮೇಲಿನ ಮೊಕದ್ದಮೆಗಳನ್ನು ದೋಷಾರೋಪಪಟ್ಟಿ ಸಲ್ಲಿಕೆಯಾದ ನಂತರ ಹಿಂಪಡೆಯಲಾಗುವುದು. ಈಗಾಗಲೇ ಇವರ ಬಿಡುಗಡೆಗೆ ರಾಜ್ಯ ಸರ್ಕಾರ ಸಹಕರಿಸಿದೆ ಎಂದ ಅವರು ಸಂಗೊಳ್ಳಿ ರಾಯಣ್ಣ ಅವರ ಗುಣಗಾನ ಮಾಡಿದ ಮುಖ್ಯಮಂತ್ರಿ ಅವರು, ಬೆಂಗಳೂರಿನ ಮೆಟ್ರೊಗೆ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ನಾಮಕರಣ ಮಾಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


