ಬಿಎಸ್ ವೈಗೆ ಈಶ್ವರಪ್ಪ ಸೆಡ್ಡು, ಸೆ.26ಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ
ಯಾವುದೇ ಸಭೆ, ಸಮಾವೇಶ ನಡೆಸುವುದಿದ್ದರೂ ಅದು ಪಕ್ಷದ ವೇದಿಕೆಯಡಿಯಲ್ಲೇ ನಡೆಯಬೇಕು ಎಂಬ ಬಿಜೆಪಿ ...

Published On :
ಬೆಂಗಳೂರು: ಯಾವುದೇ ಸಭೆ, ಸಮಾವೇಶ ನಡೆಸುವುದಿದ್ದರೂ ಅದು ಪಕ್ಷದ ವೇದಿಕೆಯಡಿಯಲ್ಲೇ ನಡೆಯಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಎಚ್ಚರಿಕೆಯ ನಡುವೆಯೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಯ ಸಮಾವೇಶ ಸೆ.26ರಂದು ಹಾವೇರಿಯಲ್ಲಿ ನಡೆಸಲು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ನಿರ್ಧರಿಸಿದ್ದಾರೆ.
ಈ ಸಂಬಂಧ ಇಂದು ಈಶ್ವರಪ್ಪ ನೇತೃತ್ವದಲ್ಲಿ ನಡೆದ ಹಿಂದುಳಿದ ಮತ್ತು ದಲಿತ ವರ್ಗಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 26ಕ್ಕೆ ಹಾವೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸಮಾವೇಶ ನಡೆಯಲಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ನೂತನ ಬ್ರಿಗೇಡ್ ಕೇವಲ ಆಹ್ವಾನಿತ ಅಷ್ಟೆ, ಅದಕ್ಕು ನನಗೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬುದು ನಮ್ಮ ಉದ್ದೇಶ ಎಂದಿದ್ದಾರೆ.
ಹಿಂದುಳಿದ ಮತ್ತು ದಲಿತ ವರ್ಗಗಳ ಸಂಘಟನೆಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಎಂಬ ಸಂಘಟನೆ ಹುಟ್ಟು ಹಾಕಿರುವುದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಹಾಗೂ ಯಡಿಯೂರಪ್ಪ ನಡುವೆ ಜಟಾಪಟಿ ನಡೆದಿತ್ತು. ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ವಾಕ್ಸಮರ ನಡೆದಿತ್ತು.
ಪಕ್ಷದ ನಾಯಕರು ಸಭೆ, ರ್ಯಾಲಿ, ಸಮಾವೇಶಗಳನ್ನು ಪಕ್ಷದ ಚೌಕಟ್ಟಿನಲ್ಲೇ ನಡೆಸಬೇಕು ಎಂಬುದು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿಯೇ ತೀರ್ಮಾನವಾಗಿದೆ ಎಂದು ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದರು. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಈಶ್ವರಪ್ಪ ಸೆ.26ಕ್ಕೆ ಸಮಾವೇಶ ನಡೆಸಲು ನಿರ್ಧರಿಸುವ ಮೂಲಕ ಸೆಡ್ಡು ಹೊಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


