ಪಾಕಿಸ್ತಾನ ನರಕ ಅಲ್ಲ, ಪಾಕಿಗಳು ತುಂಬಾ ಒಳ್ಳೇವ್ರು; ಪರಿಕ್ಕರ್ ಗೆ ರಮ್ಯಾ ಟಾಂಗ್
ಪಾಕಿಸ್ತಾನಕ್ಕೆ ಹೋಗುವುದು, ನರಕಕ್ಕೆ ಹೋಗುವುದು ಎರಡೂ ಒಂದೇ ಎಂದು ಹೇಳಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್...

Published On :
ಮಂಡ್ಯ: ಪಾಕಿಸ್ತಾನಕ್ಕೆ ಹೋಗುವುದು, ನರಕಕ್ಕೆ ಹೋಗುವುದು ಎರಡೂ ಒಂದೇ ಎಂದು ಹೇಳಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೊಗಳಿದ್ದಾರೆ.
ಇಂದು ಮಂಡ್ಯದಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಮಾಜಿ ಸಂಸದೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ನಾನು ಪಾಕಿಸ್ತಾನಕ್ಕೆ ಹೋಗಿದ್ದಾಗ ಅಲ್ಲಿನ ಜನ ನನ್ನ ಚೆನ್ನಾಗಿಯೇ ನೋಡಿಕೊಂಡರು. ಪಾಕ್ ನಲ್ಲಿ ಎಲ್ಲವೂ ಸರಿಯಿದೆ, ಎಲ್ಲರೂ ಸಹಕರಿಸುತ್ತಾರೆ ಎಂದು ಹೇಳಿದರು.
ಅಲ್ಲಿನ ಜನ ನಮ್ಮ ಹಾಗೆ ಇದ್ದಾರೆ, ಚೆನ್ನಾಗಿಯೇ ಮಾತನಾಡಿಸುತ್ತಾರೆ. ಆದರೆ ರಕ್ಷಣಾ ಸಚಿವ ಪರಿಕ್ಕರ್ ಅವರು ಹೇಳಿದ ರೀತಿಯಲ್ಲಿ ಪಾಕ್ ನರಕ ಅಲ್ಲ ಎಂದು ಹೇಳುವ ಮೂಲಕ ಹೊಗಳಿಯ ಸುರಿಮಳೆಗೈದಿದ್ದಾರೆ.
ಇದೇ ವೇಳೆ ತಮ್ಮ ಮನೆ ನವೀಕರಣ ಕಾರ್ಯ ಪೂರ್ಣಗೊಂಡ ನಂತರ ತಾವು ಮಂಡ್ಯದಲ್ಲೇ ವಾಸ್ತವ್ಯ ಹೂಡುವುದಾಗಿ ಕಾಂಗ್ರೆಸ್ ಮಾಜಿ ಸಂಸದೆ ತಿಳಿಸಿದ್ದಾರೆ.
ರಮ್ಯಾ ಅವರು ಇತ್ತೀಚಿಗೆ ಶಾಂತಿ ಮತ್ತು ಸೌಹಾರ್ದತೆ ಪ್ರಚುರಪಡಿಸುವ ಸಲುವಾಗಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ 2 ದಿನಗಳ ಸಾರ್ಕ್ ಯುವ ಸಂಸದರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


