ರಮ್ಯಾ ಬೆಂಬಲಕ್ಕೆ ನಿಂತ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ: ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಸಮರ್ಥನೆ
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕ್ ಪರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ...

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕ್ ಪರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು ನಟಿ ರಮ್ಯಾ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಕೆಲ ಒಳ್ಳೆಯ ಜನರು ಪಾಕಿಸ್ತಾನದಲ್ಲಿ ಇದ್ದಾರೆ. ಅವರು ಭಾರತದ ಜೊತೆ ಉತ್ತಮ ಬಾಂಧವ್ಯ ಬೆಳೆಸಲು ಬಯಸಿದ್ದಾರೆ. ಆದರೆ ಎರಡು ದೇಶಗಳಲ್ಲಿರುವ ಮೂಲಭೂತವಾದಿಗಳಿಂದಾಗಿ ಎರಡು ದೇಶಗಳ ಬಾಂಧವ್ಯ ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನ ಕುರಿತು ನಟಿ ರಮ್ಯಾ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ರಾಮ ಮಂದಿರ ವಿಷಯವನ್ನು ರಾಜಕೀಯಗೊಳಿಸಿದ ಬಿಜೆಪಿ ನಾಯಕರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ದೇವೇಗೌಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಇನ್ನು ನಟಿ ರಮ್ಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಆದರೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ರಮ್ಯಾ ಯಾವುದೇ ಕಾರಣಕ್ಕೂ ಕ್ಷಮಾಪಣೆ ಕೇಳುವುದಿಲ್ಲ ಎಂದು ಹೇಳಿದ್ದಾರೆ. ರಮ್ಯಾ ವಿರುದ್ಧ ಮಡಿಕೇರಿಯಲ್ಲಿ ದೇಶದ್ರೋಹದ ಕೇಸು ದಾಖಲಾಗಿದ್ದು,ಶನಿವಾರ ವಿಚಾರಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


