ರಾಜಕೀಯ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಕೊರತೆಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನದಟ್ಟು ..

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ
ಸರ್ವಪಕ್ಷ ಸಭೆ( ಸಂಗ್ರಹ ಚಿತ್ರ)
Published On :

ಬೆಂಗಳೂರು: ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಕೊರತೆಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನದಟ್ಟು ಮಾಡಿಕೊಡುವುದು ಹಾಗೂ ತಮಿಳುನಾಡಿಗೆ ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡದಿರಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಮಳೆ ಕೈಕೊಟ್ಟ ಕಾರಣ ಕಾವೇರಿ ಕಣಿವೆಯಲ್ಲಿ  ಕುಡಿಯುವ ನೀರಿಗೆ ತೊಂದರೆಯಾಗಿದೆ. ವಸ್ತುಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರಾವರಿಗಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ರಾಜ್ಯದ ನಿಲುವಿಗೆ ಎಲ್ಲಾ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿ ಜೊತೆಗೆ ವಾಸ್ತವ ಸ್ಥಿತಿಯನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡುವ ತೀರ್ಮಾನಕ್ಕೆ ಸಭೆ ಬಂದಿತು.

ಸೆಪ್ಟೆಂಬರ್ 2 ರಂದು ಸುಪ್ರೀಂ ಕೋರ್ಟಿನಲ್ಲಿ ತಮಿಳುನಾಡಿನ ಅರ್ಜಿಯ ವಿಚಾರಣೆ ನಡೆಯಲಿದ್ದು, ರಾಜ್ಯದ ಪರಿಸ್ಥಿತಿಯನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡಲು ಎಲ್ಲಾ ಅಗತ್ಯ ಮಾಹಿತಿಗಳನ್ನು ರಾಜ್ಯದ ಪರ ವಕೀಲರಿಗೆ ಒದಗಿಸಿ ನ್ಯಾಯಾಲಯದ ಮೂಲಕವೇ ಈ ಸಂಕಷ್ಟಗಳಿಗೆ ಪರಿಹಾರ ಹುಡುಕಿಕೊಳ್ಳಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಇಲ್ಲ ಎಂಬ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನ್ಯಾಯಾಲಯದಲ್ಲಿ ತಮಿಳುನಾಡಿನ ಅರ್ಜಿಯ ವಿಚಾರಣೆ ನಂತರ ನ್ಯಾಯಾಲಯದ ತೀರ್ಮಾನ ಏನಾಗುತ್ತದೋ ನೋಡಿಕೊಂಡು ಮುಂದಿನ ಹೆಜ್ಜೆಗಳನ್ನು ಇಡೋಣ ಎಂದು ಸಲಹೆ ಮಾಡಿದ್ದು, ಇದಕ್ಕೆ ಸಭೆ ಸಮ್ಮತಿ ವ್ಯಕ್ತಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.