ರಾಜಕೀಯ

ಎಲ್ಲಾ ಜಿಲ್ಲೆಗಳಲ್ಲೂ ಗಾಂಧಿ ಭವನ, ಶಾಲಾ ಮಕ್ಕಳಿಗೆ ಖಾದಿ ಸಮವಸ್ತ್ರ: ಸಿಎಂ

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿ ಹಣಕಾಸು ಮೀಸಲಿಟ್ಟಿದೆ. ನಿವೇಶನ ಲಭ್ಯವಿರುವ ಜಿಲ್ಲೆಗಳಲ್ಲಿ ಅ. 2ರಂದು ಗಾಂಧಿ ..

ಎಲ್ಲಾ ಜಿಲ್ಲೆಗಳಲ್ಲೂ ಗಾಂಧಿ ಭವನ, ಶಾಲಾ ಮಕ್ಕಳಿಗೆ ಖಾದಿ ಸಮವಸ್ತ್ರ: ಸಿಎಂ
ಸಿದ್ದರಾಮಯ್ಯ
Published On :

ಬೆಂಗಳೂರು: ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿ ಹಣಕಾಸು ಮೀಸಲಿಟ್ಟಿದೆ. ನಿವೇಶನ ಲಭ್ಯವಿರುವ ಜಿಲ್ಲೆಗಳಲ್ಲಿ ಅ. 2ರಂದು 'ಗಾಂಧಿ ಭವನ' ಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುವ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಎಚ್. ಎಸ್ ದೊರೆಸ್ವಾಮಿ ಸೇರಿದಂತೆ ಇತರ ಸ್ವಾತಂತ್ರ್ಯ ಹೋರಾಟಗಾರ ಜೊತೆ ನಡೆದ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯಗಾಂಧಿ ಭವನ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ನಿಗದಿ ಮಾಡಿರುವುದರಿಂದ ಹಣಕಾಸಿನ ಸಮಸ್ಯೆ ಇಲ್ಲ. ನಿರ್ಮಾಣವಾಗುವ ಗಾಂಧಿ ಭವನಗಳ ನಿರ್ವಹಣೆ ಮತ್ತು ಸದಾ ಚಟುವಟಿಕೆಗಳಿಂದ ಕೂಡಿರಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಸರಕಾರಿ ಶಾಲೆಗಳಿಗೆ ಖಾದಿ ಸಮವಸ್ತ್ರ ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿ ಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಖಾದಿ ಸಮವಸ್ತ್ರ ಪೂರೈಸುವುದು ಒಳ್ಳೆಯ ಸಲಹೆ. ಈ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.