ಉಪಚುನಾವಣೆ ಮೇಲೆ ಕಣ್ಣು: ನಂಜನಗೂಡಿಗೆ ಮುಖ್ಯಮಂತ್ರಿಯಿಂದ ಅನುದಾನದ ಮಹಾಪೂರ
ಮುಂಬರುವ ನಂಜನಗೂಡು ವಿಧಾನಸಭೆ ಉಪ ಚುನಾವಣೆ ಮೇಲೆ ಕಣ್ಣಿಟ್ಟಿರುವ ಸಿಎಂ ಸಿದ್ದರಾಮಯ್ಯ ಹಲವು ಯೋಜನೆಗಳನ್ನು...

ಮೈಸೂರು: ಮುಂಬರುವ ನಂಜನಗೂಡು ವಿಧಾನಸಭೆ ಉಪ ಚುನಾವಣೆ ಮೇಲೆ ಕಣ್ಣಿಟ್ಟಿರುವ ಸಿಎಂ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಘೋಷಿಸುವ ಮೂಲಕ ನಂಜನಗೂಡು ತಾಲೂಕನ್ನು ತಮ್ಮ ರಾಜಕೀಯ ಬಲ ತೋರಿಸುವ ವೇದಿಕೆಯಾಗಿ ಬಳಸಿಕೊಳ್ಳುತ್ತಿದ್ದಾರೆ.
ನಂಜನಗೂಡು ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಸುಮಾರು 400 ಕೋಟಿ ರು. ಅನುದಾನದ ಭರವಸೆ ನೀಡಿದ್ದಾರೆ. ನಂಜನಗೂಡು ತಾಲೂಕಿನ ಹುರಾ ಹೋಬಳಿಯ 28 ಕೆರೆಗಳಿಗೂ ನೀರು ತುಂಬಿಸುವ ಪ್ರಸ್ತಾವನೆಗೆ ಸಂಪುಟದ ಅನುಮೋದನೆ ಪಡೆಯದೇ ಸಿಎಂ ಅನುಮತಿ ನೀಡಿದ್ದಾರೆ.
ಈ ಕೆರೆಗಳಿಗೆ ನೀರು ತುಂಬಿಸುವುದರಿಂದ ಬರ ಪೀಡಿತ ಪ್ರದೇಶಗಳಲ್ಲಿ ತಲೆದೋರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಮೈಸೂರಿನಲ್ಲಿ ನೀರಾವರಿ ಇಲಾಖೆ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 45ಸ ಕೋಟಿ ರು. ನೀಡುವುದು ಸರ್ಕಾರಕ್ಕೆ ದೊಡ್ಡ ವಿಷಯವಾಗಿರಲಿಲ್ಲ, ಆದರೆ ಇದರ ಬಗ್ಗೆ ಯಾರೋಬ್ಬರು ನನ್ನ ಗಮನಕ್ಕೆ ತಂದಿರಲಿಲ್ಲ, ಈ ವಿಷಯ ನನಗೆ ಮೊದಲೇ ತಿಳಿದಿದ್ದರೇ ಸರ್ಕಾರ ಬಹಳ ಹಿಂದೆಯೇ ಈ ಯೋಜನೆ ಪೂರ್ಣಗೊಳಿಸುತ್ತಿತ್ತು ಎಂದು ಹೇಳಿದ್ದಾರೆ.
ಮಾರ್ಚ್ 2017 ರೊಳಗೆ ವಿವಿಧ ಹಳ್ಳಿಗಳ ಯೋಜನೆಯಡಿ.125 ಕೋಟಿ. ರು ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮವಾದ್ದರಿಂದ ಯಾರೋಬ್ಬ ನಾಯಕರ ಹೆಸರನ್ನು ಹೇಳದೇ ಸಿಎಂ ಪರೋಕ್ಷವಾಗಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ವಾಗ್ದಾಳಿ ನಡೆಸಿದರು. ಮುಂದಿನ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಬೇಕು ಎಂದು ಜನತೆಯಲ್ಲಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


