ನಂಜನಗೂಡು ಉಪಚುನಾವಣೆಗೆ ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಕಣಕ್ಕೆ: ಬಿಎಸ್ ವೈ
ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ...

ಮೈಸೂರು: ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಂಜನಗೂಡಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಂಜನಗೂಡು ವಿಧಾನಸಭೆ ಉಪ ಚುನಾವಣೆ ಮೂಲಕ ಬಿಜೆಪಿ ವಿಜಯ ಯಾತ್ರೆ ಆರಂಭವಾಗಬೇಕೆಂದು ನಾನು ಬಯಸುತ್ತೇನೆ, ಶ್ರೀನಿವಾಸ್ ಪ್ರಸಾದ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ನಾನೇ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ನೀವು ಭಾವಿಸಿ ಕೆಲಸ ಮಾಡಬೇಕು, ಭಾರೀ ಮತಗಳ ಅಂತರದಿಂದ ಶ್ರೀನಿವಾಸ್ ಪ್ರಸಾದ್ ಜಯಗಳಿಸಬೇಕು ಎಂದು ಯಡಿಯೂರಪ್ಪ ಕರೆ ನೀಡಿದ್ದರು.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮಾಜಿ ಮಂತ್ರಿಗಳಾದ ಡಿ.ಟಿ.ಜಯ ಕುಮಾರ್ ಮತ್ತು ಎಂ. ಮಹಾದೇವ ಶ್ರೀಕಂಠೇಶ್ವರ ದೇವಾಲಯವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯ ಕೆಲವರಲ್ಲಿ ಸಣ್ಣಪುಟ್ಟ ಭಿನ್ನಾಬಿಪ್ರಾಯಗಳಿವೆ. ಆದರೆ ಅದೆಲ್ಲವನ್ನು ಮೆಟ್ಟಿ ನಿಂತು 2018 ರ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಜಯಗಳಿಸುವುದರ ಕಡೆ ನಾವು ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


