ರಾಯಣ್ಣ ಬ್ರಿಗೇಟ್ ಜಟಾಪಟಿ: ಬರ ಅಧ್ಯಯನ ಪ್ರವಾಸ ತಂಡದಿಂದ ಈಶ್ವರಪ್ಪ ಔಟ್
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಕಳೆದ ಹಲವು ತಿಂಗಳುಗಳಿಂದ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವೆ ಜಟಾಪಟಿ ನಡೆಯುತ್ತಿದೆ. ಸುದೀರ್ಘ ಕಾಲದಿಂದ ...

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಕಳೆದ ಹಲವು ತಿಂಗಳುಗಳಿಂದ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವೆ ಜಟಾಪಟಿ ನಡೆಯುತ್ತಿದೆ. ಸುದೀರ್ಘ ಕಾಲದಿಂದ ಉಭಯ ನಾಯಕರ ನಡುವೆ ಮಾತಿಲ್ಲ. ಇಬ್ಬರ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಮತ್ತೊಂದು ಹಂತ ತಲುಪಿದೆ.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಬುಧವಾರದಿಂದ ಅಧ್ಯಯನ ಪ್ರವಾಸ ಕೈಗೊಳ್ಳಲು ರಚಿಸಲಾಗಿರುವ ಪಕ್ಷದ ಮುಖಂಡರನ್ನು ಒಳಗೊಂಡ ಮೂರು ತಂಡಗಳಲ್ಲೂ ಈಶ್ವರಪ್ಪ ಅವರಿಗೆ ಸ್ಥಾನ ನೀಡದೆ ಹೊರಗಿಡುವ ಮೂಲಕ ತೀಕ್ಷ್ಣವಾದ ಪೆಟ್ಟು ನೀಡಲಾಗಿದೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು, ಒಟ್ಟು 46 ಮಂದಿ ಮುಖಂಡರಿದ್ದಾರೆ. ಡಿಸೆಂಬರ್ 28 ರಿಂದ ಜನವರಿ 22 ರವರೆಗೆ ಈ ಮೂರು ತಂಡಗಳು ರಾಜ್ಯದ್ಯಂತ ಪ್ರವಾಸ ನಡೆಸಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಲಿವೆ.
ಬರ ಅಧ್ಯಯನ ತಂಡದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ನನಗೆ ಈ ನಿರ್ಧಾರದಿಂದ ನೋವಾಗಿಲ್ಲ, ಈ ಹಿಂದೆ ನಾನು ಹಲವು ಬಾರಿ ಬರ ಅಧ್ಯಯನ ಕೈಗೊಂಡಿದ್ದೇನೆ. ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಜೊತೆಗೆ ಜನತಯೆ ಜೊತೆಗೂ ಸಮಾಲೋಚಿಸಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


