ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲು ಖಚಿತ: ಜನಾರ್ಧನ ಪೂಜಾರಿ
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭವಿಷ್ಯ ನುಡಿದಿದ್ದಾರೆ...

Published On :
ಮಂಗಳೂರು: ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭವಿಷ್ಯ ನುಡಿದಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ ಧೋರಣೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ. ಇದು ಹೀಗೆ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಗೆಲ್ಲುವುದು ಅಸಾಧ್ಯ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ ಪೂಜಾರಿ, ನೀವು ಸಂಸತ್ತಿಗೆ ನಮಸ್ಕರಿಸಿ ಒಳಗೆ ಪ್ರವೇಶಿಸಿದ್ದೀರಿ. ನೀವು ಒಳ್ಳೆಯವರೆಂದು ತಿಳಿದುಕೊಂಡಿದ್ದೇವು. ನೋಟು ನಿಷೇಧದ ಬಳಿಕ ಸಮಸ್ಯೆ ಸುಧಾರಣೆಗಾಗಿ 50 ದಿನ ಕಾಲಾವಕಾಶ ಕೇಳಿ ಈಗ ಏನು ಮಾಡದೇ ವಚನ ಭ್ರಷ್ಟರಾಗಿದ್ದೀರಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್MANGALURUಮಂಗಳೂರುಜನಾರ್ದನ ಪೂಜಾರಿJanardhana Poojaryನಂಜನಗೂಡು ಉಪಚುನಾವಣೆNanjangud by election
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


