ಬಿಜೆಪಿ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪರೋಕ್ಷ ಬೆಂಬಲ: ಕುಮಾರಸ್ವಾಮಿ
ಉಪ ಚುನಾವಣೆಯಲ್ಲಿ ಸೋಲು ಖಚಿತ ಪಡಿಸಿಕೊಂಡಿರುವ ಕಾಂಗ್ರೆಸ್ ಮುಖಂಡರು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು...

ಬೆಂಗಳೂರು: ಉಪ ಚುನಾವಣೆಯಲ್ಲಿ ಸೋಲು ಖಚಿತ ಪಡಿಸಿಕೊಂಡಿರುವ ಕಾಂಗ್ರೆಸ್ ಮುಖಂಡರು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಭಾನುವಾರ ಆರ್ ಟಿ ನಗರದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, "ಬೆಂಗಳೂರಿನ ಮೂಲಸೌಕರ್ಯಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಯಾವುದೇ ರೀತಿಯ ಕೊಡುಗೆ ನೀಡಿಲ್ಲ. ಬದಲಿಗೆ ಕಸ, ರಸ್ತೆಯಲ್ಲಿ ಗುಂಡಿ, ಭ್ರಷ್ಟಾಚಾರ ಹೀಗೆ ನಾನಾ ಸಮಸ್ಯೆಗಳನ್ನು ತೊಂದಿಡ್ಡಿದೆ. ಕಾಂಗ್ರೆಸ್‌ನ ಅನೇಕ ಮುಖಂಡರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಟ್ಟಿದ್ದಾರೆ. ಅದನ್ನು ತಡೆಯುವ ಶಕ್ತಿ ಮತದಾರರಲ್ಲಿ ಮಾತ್ರ ಇದೆ. ಪ್ರಚಾರಕ್ಕೆ ಬಂದಾಗ ನಮ್ಮನ್ನು ಪ್ರಶ್ನಿಸುವ ಬದಲು ಈವರೆಗೆ ಆಡಳಿತ ನಡೆಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರನ್ನು ಪ್ರಶ್ನಿಸಿ ಎಂದು ಕುಮಾರ ಸ್ವಾಮಿ ಹೇಳಿದರು.
"ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಚುನಾವಣೆ ಗೆಲ್ಲಲು ಮತದಾರರಿಗೆ ಹಣ ಹಂಚುತ್ತಿದ್ದಾರೆ. ಅದನ್ನು ಪಡೆದು ನೀವು ಮತ ಹಾಕುತ್ತೀರಿ. ಅವರು ಆ ಹಣ ವಾಪಸ್ ಪಡೆಯಲು ಮತ್ತಷ್ಟು ಭ್ರಷ್ಟಾಚಾರ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಹೆಚ್ಚುತ್ತವೆ. ಹೀಗಾಗಿ ಹಣ ಪಡೆಯದೆ ಮತ ಚಲಾಯಿಸಿ ಎಂದು ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿದರು.
ಚುನಾವಣೆ ನಂತರ ಜಮೀರ್ ವಿರುದ್ಧ ಕ್ರಮ..?
ಇನ್ನು ಪಕ್ಷದಲ್ಲಿ ಭುಗಿಲೆದ್ದಿರುವ ಆಂತರಿಕ ಭಿನ್ನಮತದ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಮುಗಿದ ನಂತರ ಜಮೀರ್ ಅವರ ನಡವಳಿಕೆ ಕುರಿತು ಪಕ್ಷದ ಸಭೆಯಲ್ಲಿ ಚರ್ಚಿಸಲಾಗುವುದು. ನನ್ನಲ್ಲಿ ಏನು ಬದಲಾವಣೆಯಾಗಿದೆ ಮತ್ತು ತಪ್ಪೇನಿದೆ ಎಂಬುದನ್ನು ಜಮೀರ್ ತಿಳಿಸಿದರೆ ಅದನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


