ರಾಜಕೀಯ

ಜೆಡಿಎಸ್ ತೊರೆಯುತ್ತಾರೆಯೇ ಪಿಜಿಆರ್ ಸಿಂಧ್ಯಾ..?

ಜೆಡಿಎಸ್ ಪರಿವಾರದ ಪ್ರಮುಖ ಮತ್ತು ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯ ಸದ್ಯದಲ್ಲಿಯೇ ಪಕ್ಷ ತೊರೆಯಲಿದ್ದು, ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ...

ಜೆಡಿಎಸ್ ತೊರೆಯುತ್ತಾರೆಯೇ ಪಿಜಿಆರ್ ಸಿಂಧ್ಯಾ..?
ಜೆಡಿಎಸ್ ಮುಖಂಡ ಪಿಜಿಆರ್ ಸಿಂಧ್ಯ (ಸಂಗ್ರಹ ಚಿತ್ರ)
Published On :

ರಾಮನಗರ: ಜೆಡಿಎಸ್ ಪರಿವಾರದ ಪ್ರಮುಖ ಮತ್ತು ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯ ಸದ್ಯದಲ್ಲಿಯೇ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಕಾಂಗ್ರೆಸ್  ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಶನಿವಾರ ಕನಕಪುರದ ಬೋಳಾರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಸಿಂಧ್ಯ ಪಾಲ್ಗೊಂಡಿದ್ದು, ಊಹಾಪೋಹಗಳಿಗೆ ಮತ್ತಷ್ಟು ಆಸ್ಪದ  ನೀಡಿದಂತಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಿಂಧ್ಯ ತಮ್ಮ ಒಂದು ಕಾಲದ ಎದುರಾಳಿ ಮತ್ತು ಹಾಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.  ಅಲ್ಲದೆ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡುವ ಮೂಲಕ ಸಿಂಧ್ಯ ಜೆಡಿಎಸ್‌ನಿಂದ ದೂರವಾಗುವ ಸೂಚನೆ ನೀಡಿದ್ದಾರೆ ಎಂದು  ಹೇಳಲಾಗುತ್ತಿದೆ.

ಜನತಾ ಪರಿವಾರದಲ್ಲಿ ಗುರುತಿಸಿಕೊಂಡು ಬಿಎಸ್‌ಪಿಗೆ ಸೇರ್ಪಡೆಯಾಗಿ, ಮತ್ತೆ ಜೆಡಿಎಸ್‌ಗೆ ಬಂದಿದ್ದ ಸಿಂಧ್ಯ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಡಿ.ಕೆ.  ಶಿವಕುಮಾರ್ ವಿರುದ್ಧ  ಸ್ಪರ್ಧಿಸಿ ಸೋತಿದ್ದರು. ಆ ಬಳಿಕ ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದ, ಸಿಂಧ್ಯ ಇದೇ ಮೊದಲ ಬಾರಿಗೆ ರಾಜಕೀಯ ಕಾರ್ಯಕ್ರಮವೊಂದರಲ್ಲಿ  ಕಾಣಿಸಿಕೊಂಡಿದ್ದಾರೆ. ಅದೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕ್ರಮದಲ್ಲಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.