ರಾಜಕೀಯ

ಅನ್ಸಾರಿ ಕಾಂಗ್ರೆಸ್ ಸೇರುವ ಪ್ರಸ್ತಾವನೆ ಇಲ್ಲ: ಎಚ್.ಸಿ. ಮಹದೇವಪ್ಪ

ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿರುವಂತೆಯೇ ಭಿನ್ನಮತೀಯ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ಕಾಂಗ್ರೆಸ್ ತಳ್ಳಿಹಾಕಿದ್ದು, ಅಂತಹ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ..

ಅನ್ಸಾರಿ ಕಾಂಗ್ರೆಸ್ ಸೇರುವ ಪ್ರಸ್ತಾವನೆ ಇಲ್ಲ: ಎಚ್.ಸಿ. ಮಹದೇವಪ್ಪ
ಸಚಿವ ಮಹದೇವಪ್ಪ (ಸಂಗ್ರಹ ಚಿತ್ರ)
Published On :

ರಾಯಚೂರು: ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿರುವಂತೆಯೇ ಭಿನ್ನಮತೀಯ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ಕಾಂಗ್ರೆಸ್ ತಳ್ಳಿಹಾಕಿದ್ದು, ಅಂತಹ  ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಸಚಿವ ಎಚ್ ಸಿ ಮಹದೇವಪ್ಪ ಅವರು, ಜೆಡಿಎಸ್ ಶಾಸಕರಾದ ಜಮೀರ್ ಅಹಮದ್ ಹಾಗೂ ಇಕ್ಬಾಲ್ ಅನ್ಸಾರಿ ಅವರನ್ನು ಕಾಂಗ್ರೆಸ್‌ಗೆ  ಸೇರಿಸಿಕೊಳ್ಳುವ ಪ್ರಸ್ತಾವನೆ ಹೈಕಮಾಂಡ್ ಮುಂದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಜೆಡಿಎಸ್ ರಾಜ್ಯಾಧ್ಯ ಎಚ್ ಡಿ ಕುಮಾರಸ್ವಾಮಿ ಅವರು, ಉಪ ಚುನಾವಣೆ ಪ್ರಚಾರಕ್ಕೆ ಬರುವ ಸಚಿವರು  ಹಣದ ಚೀಲ ಇಟ್ಟುಕೊಂಡು ಬಂದಿದ್ದಾರೆ ಎಂದು  ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿದರು. "ಇಂಥ ಕೆಲಸವನ್ನು ಕುಮಾರಸ್ವಾಮಿ ಮಾಡಿದ್ದರಿಂದ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ಅವರ  ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಮಹದೇವಪ್ಪ ಹೇಳಿದರು.

ಜಮೀರ್ ಪರ ಬೆಂಬಲಿಗರ ಬ್ಯಾಟಿಂಗ್
ಶಾಸಕ ಜಮೀರ್ ಅಹಮದ್ ಖಾನ್ ಮೀರ್‌ಸಾಧಿಕ್ ಇದ್ದಂತೆ ಎಂಬ ಅರ್ಥದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ನೀಡಿರುವ ಹೇಳಿಕೆ ಖಂಡಿಸಿ ಚಾಮರಾಜಪೇಟೆಯಲ್ಲಿ ಹಲವು ಮುಸ್ಲಿಂ  ಮುಖಂಡರು ಪ್ರತಿಭಟನೆ ನಡೆಸಿದರು. ಜೆಡಿಎಸ್ ಬೆಳವಣಿಗೆಗೆ ಜಮೀರ್ ಶ್ರಮಿಸುತ್ತಿದ್ದಾರೆ. ಅವರ ವಿರುದ್ಧ ವರಿಷ್ಠರು ಹೇಳಿಕೆ ನೀಡುವುದು ಸರಿಯಲ್ಲ ಎಂದು ಟೀಕಿಸಿದರು.\

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.