ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನಗೆ ಕರೆ ಮಾಡಿ: ಮಾಜಿ ಸಂಸದೆ ರಮ್ಯಾ
ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನ್ನ ಮೊಬೈಲ್ ನಂಬರ್ ಗೆ ಮಿಸ್ ಕಾಲ್ಡ್ ಕೊಡಿ, ನಾನು ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇನೆ. ಎಲ್ಲರೂ, ನನ್ನ ನಂಬರ್ ಸೇವ್ ಮಾಡಿಕೊಳ್ಳಿ ...

ಪಾಂಡವಪುರ (ಮಂಡ್ಯ): ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನ್ನ ಮೊಬೈಲ್ ಸಂಖ್ಯೆಗೆ ಮಿಸ್ ಕಾಲ್ಡ್ ಕೊಡಿ, ನಾನು ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇನೆ. ಎಲ್ಲರೂ, ನನ್ನ ನಂಬರ್ ಸೇವ್ ಮಾಡಿಕೊಳ್ಳಿ ಎಂದು ಮಾಜಿ ಸಂಸದೆ ರಮ್ಯಾ ತಮ್ಮ ಕ್ಷೇತ್ರದ ಜನರಿಗೆ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಾರೆ.
ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರಿನಲ್ಲಿ ಜಿಪಂ ಮತ್ತು ತಾಪಂ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದ ಅವರು, ಸಾರ್ವಜನಿಕರಿಗೆ ತೊಂದರೆಯಾದರೆ ಮಿಸ್ ಕಾಲ್ಡ್ ಕೊಡಿ. ಕೂಡಲೇ ಆ ನಂಬರ್ನಿಂದ ನಿಮಗೆ ಸಂದೇಶ ಬರುತ್ತದೆ’ ಎಂದು ಹೇಳಿದರು.
ಈಗಾಗಲೇ ಮಂಡ್ಯದಲ್ಲಿ ಕಚೇರಿ ನೋಡಲಾಗಿದೆ. ಜಿಪಂ ಮತ್ತು ತಾಪಂ ಚುನಾವಣೆ ಮುಗಿಯುವ ತನಕ ಮಂಡ್ಯದಲ್ಲಿಯೇ ಇದ್ದು, ಎಲ್ಲ ತಾಲೂಕುಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದರು. ಇದರಿಂದ ತಮ್ಮ ದೂರವಾಣಿ ಸಂಖ್ಯೆ ನೀಡುವ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯವಾಗುವ ಸುಳಿವನ್ನು ರಮ್ಯಾ ನೀಡಿದಂತಾಗಿದೆ.
ಇನ್ನು ಮೊಬೈಲ್ ಸಂಖ್ಯೆ ನೀಡಿದ ಕೂಡಲೇ ಸಾರ್ವಜನಿಕರು ಮಿಸ್ ಕಾಲ್ಡ್ ಕೊಡಲು ಪ್ರಾರಂಭಿಸಿದರು. ಕೂಡಲೇ ಕರೆ ಮಾಡಿದವರಿಗೆ ‘ಕರೆ ಮಾಡಿದ್ದಕ್ಕೆ ಧನ್ಯವಾದಗಳು. ನಾನು ನಿಮ್ಮ ಜತೆ ನಿರಂತರ ಸಂಪರ್ಕದಲ್ಲಿರುತ್ತೇನೆ. ನಿಮ್ಮ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಕರೆ ಮಾಡುತ್ತೇವೆ’ ಎಂಬ ಮುದ್ರಿತ ಸಂದೇಶ ಕೇಳಿ ಜನ ದಂಗಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


