ತವರು ಜಿಲ್ಲೆ ಮೈಸೂರಲ್ಲೇ ಸಿಎಂಗೆ ಸೋಲುವ ಭೀತಿ ಎದುರಾಗಿದೆ: ಎಚ್ ಡಿಕೆ ವ್ಯಂಗ್ಯ
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮೈಸೂರಿನಲ್ಲಿ ಸೋಲಿನ ಭೀತಿ ಕಾಣುತ್ತಿದೆ. ಹೀಗಾಗಿ ಜಿಲ್ಲೆಯಲ್ಲೇ..

ಮೈಸೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮೈಸೂರಿನಲ್ಲಿ ಸೋಲಿನ ಭೀತಿ ಕಾಣುತ್ತಿದೆ. ಹೀಗಾಗಿ ಜಿಲ್ಲೆಯಲ್ಲೇ ಬೀಡುಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಗೆಲುವಿಗಾಗಿ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮೈಸೂರಿನಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯನವರಿಗೆ ಈಗ ಮೈಸೂರಿನಲ್ಲಿ ಸೋಲಿನ ಭೀತಿ ಕಾಣುತ್ತಿದೆ. ಅದಕ್ಕಾಗಿಯೇ ಮೈಸೂರಿನಲ್ಲೇ ನಾಲ್ಕು ದಿನಗಳಿಂದ ಮೊಕ್ಕಾಂ ಹೂಡಿ ಪ್ರಚಾರ ಕೈಗೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಟಿ ರಮ್ಯಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಕುಮಾರಸ್ವಾಮಿ, ರಮ್ಯಾ ಅವರ ಮಟ್ಟಕ್ಕೆ ಇಳಿದು ನಾನು ಪ್ರತಿಕ್ರಿಯಿಸುವುದಿಲ್ಲವೆಂದು ಹೇಳಿದರು. ಅವರ ಯಾವುದೇ ಟೀಕೆಗಳಿಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


