ರಾಜಕೀಯ

ಎಚ್ ಡಿ ಕುಮಾರಸ್ವಾಮಿ ಆರೋಪ ಬುಡವಿಲ್ಲದ್ದು: ಜನಾರ್ಧನ ಪೂಜಾರಿ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಡವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ...

ಎಚ್ ಡಿ ಕುಮಾರಸ್ವಾಮಿ ಆರೋಪ ಬುಡವಿಲ್ಲದ್ದು: ಜನಾರ್ಧನ ಪೂಜಾರಿ
ಜನಾರ್ಧನ ಪೂಜಾರಿ-ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಡವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತವಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯಕ್ಕಾಗಿ ಸಿದ್ದರಾಮಯ್ಯನವರ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಈಗಾಗಲೇ ಸಿಎಂ ಬಳಿ ಇರುವ ವಾಚು, ಕಳುವಾಗಿರುವ ತಮ್ಮ ವಾಚಲ್ಲ ಎಂದು ಡಾ.ಸುಧಾಕರ್ ಶೆಟ್ಟಿ ಸ್ಪಷ್ಟ ಪಡಿಸಿದ್ದಾರೆ. ಇಷ್ಟಾದರೂ, ಎಚ್ ಡಿ ಕುಮಾರಸ್ವಾಮಿ ಅವರು ಮಾತ್ರ ಸಿದ್ದರಾಮಯ್ಯ ಅವರಿಗೆ ನೀಡಿರುವ ವಾಚು ಕದ್ದದ್ದು ಎಂದು ಹೇಳುತ್ತಾರೆ. ಸ್ಪಷ್ಟನೇ ಕೊಟ್ಟಿದ್ದರೂ ರಾಜಕೀಯ ಲಾಭಕ್ಕೆ ಮತ್ತೆ ಅದೇ ಹೇಳಿಕೆಯನ್ನು ನೀಡುವುದು ಸರಿಯಲ್ಲ ಎಂದು ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. 
ಸಿದ್ದರಾಮಯ್ಯ ದುಬಾರಿ ಉಡುಗೊರೆಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳುವವರು, ಮೊದಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಲಿ, ದುಬಾರಿ ಉಡುಗೊರೆ ತೆಗೆದುಕೊಳ್ಳಬೇಡಿ ಎಂದು. ಪ್ರಧಾನಿ ನರೇಂದ್ರ ಮೋದಿ ಅವರೇ ರು.10 ಲಕ್ಷ ಮೌಲ್ಯದ ಸೂಟನ್ನು ಉಡುಗೊರೆಯನ್ನಾಗಿ ಪಡೆದಿದ್ದಾರೆ. ಹಾಗಾಗದರೆ, ಇಷ್ಟೋಂದು ದುಬಾರಿ ಉಡುಗೊರೆ ಏಕೆ ಪಡೆದರು ಎಂಬುದಕ್ಕೆ ಮೋದಿ ಉತ್ತರಿಸಬೇಕು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.