ಸಿಎಂ ಸಿದ್ದರಾಮಯ್ಯ ದುಬಾರಿ ವಾಚ್ ಪ್ರಕರಣ: ಬಿಜೆಪಿಯಿಂದ ನಿಲುವಳಿ ಸೂಚನೆಗೆ ನಿರ್ಧಾರ
ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದದ ಕುರಿತು ಚರ್ಚಿಸಲು ವಿಧಾನಸಭೆಯಲ್ಲಿ ಮಂಗಳವಾರ ನಿಲುವಳಿ ಸೂಚನೆ ಮಂಡಿಸಲು ಬಿಜೆಪಿ ನಿರ್ಧರಿಸಿದೆ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದದ ಕುರಿತು ಚರ್ಚಿಸಲು ವಿಧಾನಸಭೆಯಲ್ಲಿ ಮಂಗಳವಾರ ನಿಲುವಳಿ ಸೂಚನೆ ಮಂಡಿಸಲು ಬಿಜೆಪಿ ನಿರ್ಧರಿಸಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎತ್ತಿರುವ ಈ ಪ್ರಕರಣವನ್ನು ಮುಂದುವರಿಸಲು ನಿರ್ಧರಿಸಿದೆ.
ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಸುದೀರ್ಘವಾಗಿ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ.ವಿಧಾಲ ಮಂಡಲದ ಎರಡು ಸದನಗಳಲ್ಲಿ ನಿಲುವಳಿ ಸೂಚನೆಗೆ ಬಿಜೆಪಿ ತೀರ್ಮಾನಿಸಿದೆ. ದುಬಾರಿ ವಾಚ್ ವಿವಾದವೂ ಸೇರಿದಂತೆ ಬರ ಕಾಮಗಾರಿಯಲ್ಲಿನ ಲೋಪಗಳು, ಕುಡಿಯುವ ನೀರಿನ ಸಮಸ್ಯೆ, ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರ ನೇಮಕ/ಪದಚ್ಯುತಿ ಗೊಂದಲಗಳು, ಮಂತ್ರಿಗಳ ಭ್ರಷ್ಟಾಚಾರ ಮತ್ತು ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಕುರಿತು ಗಮನ ಸೆಳೆಯಲಾಗುವುದು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಎಲ್ಲ ಶಾಸಕರೂ ಸದನದ ಕಲಾಪದಲ್ಲಿ ತಪ್ಪದೇ ಭಾಗವಹಿಸಿ ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ದುಬಾರಿ ವಾಚ್ ಕುರಿತಂತೆ ಸಿಎಂ ಸ್ಪಷ್ಟೀಕರಣ ನೀಡಿದರೂ ಅನೇಕ ಗೊಂದಲಗಳಿವೆ ಎಂದ ಅವರು, ಈ ವಿಷಯದ ಕುರಿತು ಚರ್ಚೆಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಒಂದೊಂದೇ ಎಲ್ಲ ವಿಷಯಗಳನ್ನು ಚರ್ಚೆಗೆ ಎತ್ತಿಕೊಳ್ಳಲಾಗುವುದು ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


